ನವದೆಹಲಿ/ಬೆಂಗಳೂರು: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆಯಾಗಿದೆ.

ಬೆಳ್ಳಿ ಧಾರಣೆಯು ಕೆ.ಜಿಗೆ ₹1,200 ಏರಿಕೆಯಾಗಿದ್ದು, ₹85,800ಕ್ಕೆ ಮುಟ್ಟಿದೆ. 10 ಗ್ರಾಂ ಚಿನ್ನಕ್ಕೆ ₹100 ಹೆಚ್ಚಳವಾಗಿದ್ದು, ₹74,200ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಬೆಂಗಳೂರಲ್ಲಿ 10 ಗ್ರಾಂ ಚಿನ್ನವು ₹74,150 ಮತ್ತು ಕೆ.ಜಿ ಬೆಳ್ಳಿ ₹85,500ರಂತೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,5468 ಡಾಲರ್ (ಅಂದಾಜು ₹2.13 ಲಕ್ಷ) ಮತ್ತು 29 ಡಾಲರ್‌ನಂತೆ (ಅಂದಾಜು ₹2,449) ಮಾರಾಟವಾಗಿದೆ.

ಏರಿಕೆಗೆ ಕಾರಣವೇನು?: ಸಾಗರೋತ್ತರ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಕೆಯಾಗಿರುವುದು, ದೇಶೀಯ ಆಭರಣ ತಯಾರಕರು ಮತ್ತು ಮಾರಾಟಗಾರರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಚಿನ್ನದ ಧಾರಣೆಯು ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.