ಭಾನುವಾರ, ಫೆಬ್ರವರಿ 28, 2021
21 °C

ಚಿನ್ನ ₹ 185, ಬೆಳ್ಳಿ ₹ 1,322 ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ಧಾರಣೆ ಏರಿಕೆ ಕಂಡಿವೆ.

10 ಗ್ರಾಂ ಚಿನ್ನದ ದರ ₹ 185ರಷ್ಟು ಏರಿಕೆಯಾಗಿ ₹ 49,757ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,322ರಷ್ಟು ಹೆಚ್ಚಾಗಿ ₹ 68,156ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

‘ಡಾಲರ್‌ ಮೌಲ್ಯ ಇಳಿಕೆ, ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿರುವುದು ಹಾಗೂ ಮತ್ತೆ ಲಾಕ್‌ಡೌನ್‌ ವಿಧಿಸುವ ಕಾರಣಗಳಿಂದಾಗಿ ಚಿನ್ನ ದರದಲ್ಲಿ ಏರಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು