ಶನಿವಾರ, ಸೆಪ್ಟೆಂಬರ್ 26, 2020
27 °C

ಚಿನ್ನದ ದರ ಗರಿಷ್ಠ ₹ 1,558 ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ/ಮುಂಬೈ: ದೇಶದ ಚಿನಿವಾರ ಪೇಟೆಗಳಲ್ಲಿ ಚಿನ್ನ, ಬೆಳ್ಳಿ ಧಾರಣೆ ಗರಿಷ್ಠ ಇಳಿಕೆ ಕಂಡಿದೆ. ಮುಂಬೈನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ ₹ 1,558ರಷ್ಟು ಇಳಿಕೆಯಾಗಿದ್ದು, ₹ 53,735ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 2,397 ಇಳಿಕೆಯಾಗಿ ₹ 71,211ಕ್ಕೆ ತಲುಪಿದೆ.

ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ₹ 1,317ರಂತೆ ಇಳಿಕೆ ಕಂಡು ₹54,763ಕ್ಕೆ ತಲುಪಿದೆ. ಬೆಳ್ಳಿ ದರ ಕೆ.ಜಿಗೆ ₹ 2,943ರಂತೆ ಕಡಿಮೆಯಾಗಿ ₹ 73,600ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ. ಇದರ ಜತೆಗೆ ಡಾಲರ್‌ ಎದುರು ರೂಪಾಯಿ ಮೌಲ್ಯ ಹೆಚ್ಚಾಗಿರುವುದು ಸಹ ದೇಶದಲ್ಲಿ ಚಿನ್ನದ ಬೆಲೆ ಇಳಿಕೆಗೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು