ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹900, ಬೆಳ್ಳಿ ₹200 ಇಳಿಕೆ

Published 11 ಡಿಸೆಂಬರ್ 2023, 15:25 IST
Last Updated 11 ಡಿಸೆಂಬರ್ 2023, 15:25 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರವು ಪ್ರತಿ 10 ಗ್ರಾಂ.ಗೆ ₹900 ಇಳಿಕೆ ಕಂಡು, ₹61,300ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆಯು ಕೆ.ಜಿಗೆ ₹200 ಇಳಿಕೆ ಕಂಡು ₹76 ಸಾವಿರಕ್ಕೆ ತಲುಪಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಆಗಿದ್ದರಿಂದ ದೇಶೀಯ ಮಾರುಕಟ್ಟೆಯಲ್ಲೂ ಬೆಲೆ ಇಳಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 1,995 ಡಾಲರ್‌ ಮತ್ತು ಬೆಳ್ಳಿ ಒಂದು ಔನ್ಸ್‌ಗೆ 22.98 ಡಾಲರ್‌ನಂತೆ ಮಾರಾಟ ಆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT