ನವದೆಹಲಿ: ದೇಶೀಯ ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಳವಾದ ಕಾರಣ ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಸೋಮವಾರ ಏರಿಕೆಯಾಗಿದೆ.
10 ಗ್ರಾಂ ಚಿನ್ನದ ದರವು ₹200 ಹೆಚ್ಚಳವಾಗಿ ₹72,350ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1 ಸಾವಿರ ಏರಿಕೆಯಾಗಿ ₹83,500ಕ್ಕೆ ಮುಟ್ಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,481 ಡಾಲರ್ (ಅಂದಾಜು ₹2.08 ಲಕ್ಷ) ಮತ್ತು 28 ಡಾಲರ್‌ನಂತೆ (ಅಂದಾಜು ₹2,351) ಮಾರಾಟವಾಗಿದೆ.
‘ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಹೂಡಿಕೆದಾರರು ಹೆಚ್ಚು ಸುರಕ್ಷಿತವಾದ ಚಿನ್ನದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಇದರಿಂದ ಚಿನ್ನದ ದರವು ಏರಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸೌಮಿಲ್ ಗಾಂಧಿ ಹೇಳಿದ್ದಾರೆ.