ನವದೆಹಲಿ: ‘ಕರೆನ್ಸಿ ವಿನಿಮಯ ದರವನ್ನು ಮಾರುಕಟ್ಟೆ ಶಕ್ತಿಗಳು ನಿರ್ಧರಿಸುತ್ತವೆ. ಜೊತಗೆ ಹಲವಾರು ಜಾಗತಿಕ ಅಂಶಗಳು ಇದರ ಮೇಲೆ ಪ್ರಭಾವ ಬೀರುತ್ತವೆ. ಕರೆನ್ಸಿ ವಿನಿಮಯ ದರದಲ್ಲಿ ಸರ್ಕಾರದ ಮಧ್ಯಪ್ರವೇಶ ಇಲ್ಲ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

ಆದರೆ, ಸರ್ಕಾರವು ಸರಕು ಮತ್ತು ಸೇವೆಗಳ ರಫ್ತಿಗೆ ಉತ್ತೇಜನ ನೀಡಲು, ಆಮದು ಮೇಲಿನ ಅವಲಂಬನೆ ಕಡಿಮೆ ಮಾಡಲು ಮತ್ತು ದೇಶದಲ್ಲಿ ಹೆಚ್ಚಿನ ಹೂಡಿಕೆಗೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಶನಿವಾರ ತಿಳಿಸಿದ್ದಾರೆ.

ಕಳೆದ ಎರಡರಿಂದ ಮೂರು ದಿನಗಳ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ಏರಿಕೆಯಾಗಿದೆ. ಇವೆಲ್ಲವೂ ಮಾರುಕಟ್ಟೆ ಆಧಾರಿತ ಅಂಶಗಳಾಗಿವೆ ಎಂದು ಹೇಳಿದ್ದಾರೆ. ಶುಕ್ರವಾರದ ವಹಿವಾಟಿನ ಅಂತ್ಯದ ವೇಳೆಗೆ ಡಾಲರ್ ಎದುರು ರೂಪಾಯಿ ಮೌಲ್ಯವು 95.60ಕ್ಕೆ ಕೊನೆಗೊಂಡಿತ್ತು.

ಒಂದು ಕಾಲದಲ್ಲಿ ಏಷ್ಯಾದ ರಾಷ್ಟ್ರಗಳ ಪೈಕಿ ಹೆಚ್ಚು ಸ್ಥಿರವಾದ ಕರೆನ್ಸಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದ್ದ ರೂಪಾಯಿ ಮೌಲ್ಯ, ಈ ವರ್ಷ ಬಹಳಷ್ಟು ಕುಸಿದಿದೆ. ಹೆಚ್ಚುತ್ತಿರುವ ಕಚ್ಚಾ ತೈಲದ ದರ, ವಿದೇಶಿ ಬಂಡವಾಳದ ಹೊರಹರಿವು, ವ್ಯಾಪಾರ ಕೊರತೆ ಅಂತರದ ಏರಿಕೆ ಮತ್ತು ಡಾಲರ್ ಮೌಲ್ಯ ಏರಿಕೆಯಿಂದ ರೂಪಾಯಿ ಮೌಲ್ಯ ಈ ವರ್ಷ ತೀವ್ರವಾಗಿ ಕುಸಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.