ಶುಕ್ರವಾರ, ಆಗಸ್ಟ್ 19, 2022
22 °C

ಬ್ಯಾಂಕುಗಳಿಗೆ ₹ 20 ಸಾವಿರ ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಒಟ್ಟು ₹ 20 ಸಾವಿರ ಕೋಟಿ ನೀಡಲು ಕೇಂದ್ರ ಸರ್ಕಾರವು ಸೋಮವಾರ ಸಂಸತ್ತಿನ ಅನುಮೋದನೆ ಕೋರಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ, 2020–21ನೇ ಸಾಲಿನ ಪೂರಕ ಬೇಡಿಕೆಗಳ ಮೊದಲ ಕಂತಿನ ಭಾಗ ಇದು. 

ಬ್ಯಾಂಕುಗಳ ಸಾಲ ವಿತರಣೆ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು 2019–20ರಲ್ಲಿ ಒಟ್ಟು ₹ 70 ಸಾವಿರ ಕೋಟಿ ಹಣ ನೀಡುವ ಪ್ರಸ್ತಾವನೆ ಇರಿಸಿತ್ತು. ಆದರೆ, 2020–21ನೇ ಸಾಲಿನಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಕೊಡುವ ಉದ್ದೇಶಕ್ಕೆ ಹಣ ಮೀಸಲು ಇರಿಸುವ ಪ್ರಸ್ತಾವನೆಯನ್ನು ಕೇಂದ್ರ ಮಾಡಲಿಲ್ಲ. ಸಂದರ್ಭಕ್ಕೆ ತಕ್ಕಂತೆ ಬ್ಯಾಂಕುಗಳೇ ಮಾರುಕಟ್ಟೆಯಿಂದ ಹಣ ಸಂಗ್ರಹಿಸುತ್ತವೆ ಎಂಬ ಆಶಾಭಾವನೆಯನ್ನು ಸರ್ಕಾರ ಹೊಂದಿತ್ತು.

ಹಿಂದಿನ ಹಣಕಾಸು ವರ್ಷದಲ್ಲಿ ಕೇಂದ್ರವು ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಆಂಧ್ರ ಬ್ಯಾಂಕ್‌ಗೆ ಹಣಕಾಸಿನ ನೆರವು ಒದಗಿಸಿತು.

ಬ್ಯಾಂಕ್ ಆಫ್ ಬರೋಡಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯುಕೋ ಬ್ಯಾಂಕ್, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಕೂಡ ಕೇಂದ್ರ ನೆರವು ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು