ಗುರುವಾರ , ಆಗಸ್ಟ್ 18, 2022
25 °C

ಸೂರ್ಯಕಾಂತಿ, ಸೋಯಾ ಎಣ್ಣೆ ಸುಂಕ ರಹಿತ ಆಮದಿಗೆ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಾರ್ಷಿಕ 20 ಲಕ್ಷ ಟನ್‌ವರೆಗೆ ಕಚ್ಚಾ ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯ ಆಮದಿಗೆ ಸೀಮಾ ಸುಂಕ ಹಾಗೂ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್‌ನಿಂದ ಕೇಂದ್ರ ಸರ್ಕಾರ ವಿನಾಯಿತಿ ನೀಡಿದೆ. ದೇಶಿ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ತಗ್ಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಸುಂಕ ರಹಿತವಾಗಿ 20 ಲಕ್ಷ ಟನ್ ಕಚ್ಚಾ ಸೋಯಾ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಆಮದು ಮಾಡಿಕೊಳ್ಳುವ ಅವಕಾಶವು ಎರಡು ಆರ್ಥಿಕ ವರ್ಷಗಳಿಗೆ (2022–23 ಹಾಗೂ 2023–24) ಅನ್ವಯವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.

‘ಈ ಕ್ರಮವು ಗ್ರಾಹಕರಿಗೆ ಸಮಾಧಾನ ತರಲಿದೆ’ ಎಂದು ಕೇಂದ್ರ ‍ಪರೋಕ್ಷ ತೆರಿಗೆಗಳ ಮಂಡಳಿಯು ಟ್ವೀಟ್ ಮಾಡಿದೆ. ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಿಂದಿನ ವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ತಗ್ಗಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು