ಸೋಮವಾರ, ಮೇ 16, 2022
28 °C

ಜವಳಿ: ₹ 19 ಸಾವಿರ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾವಕ್ಕೆ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್‌ಐ) ಯೋಜನೆಯ ಅಡಿ ಜವಳಿ ಕ್ಷೇತ್ರದಲ್ಲಿ ₹ 19 ಸಾವಿರ ಕೋಟಿ ಹೂಡಿಕೆಗೆ ಸಂಬಂಧಿಸಿದಂತೆ 61 ಅರ್ಜಿಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಜವಳಿ ಕಾರ್ಯದರ್ಶಿ ಯು.ಪಿ. ಸಿಂಗ್‌ ಗುರುವಾರ ತಿಳಿಸಿದ್ದಾರೆ.

ಪಿಎಲ್‌ಐ ಅಡಿ ಜವಳಿ ಕ್ಷೇತ್ರದಲ್ಲಿ ಹೂಡಿಕೆಗೆ ಒಟ್ಟಾರೆ 67 ಅರ್ಜಿಗಳು ಬಂದಿದ್ದವು ಎಂದು ಅವರು ಹೇಳಿದ್ದಾರೆ.

ಒಪ್ಪಿಗೆ ನೀಡಿರುವ ಅರ್ಜಿಗಳಿಂದ ₹ 19,077 ಕೋಟಿ ಹೂಡಿಕೆ ಆಗುವ ನಿರೀಕ್ಷೆ ಮಾಡಲಾಗಿದೆ. ವಹಿವಾಟು  ಮೊತ್ತವು ₹ 1.84 ಲಕ್ಷ ಕೋಟಿ ಆಗುವ ಅಂದಾಜು ಇದೆ ಎಂದು ತಿಳಿಸಿದ್ದಾರೆ.

ದೇಶದ ತಯಾರಿಕಾ ಸಾಮರ್ಥ್ಯ ವೃದ್ಧಿಸಲು ಮತ್ತು ರಫ್ತು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಲ್‌ಐ ಯೋಜನೆ ಆರಂಭಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು