ಬುಧವಾರ, ಸೆಪ್ಟೆಂಬರ್ 29, 2021
20 °C

ವಾಹನ, ಡ್ರೋನ್ ಉದ್ಯಮಕ್ಕೆ ₹ 26,058 ಕೋಟಿ ಪ್ಯಾಕೇಜ್‌: ಕೇಂದ್ರ ಅನುಮೋದನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ವಾಹನ, ವಾಹನದ ಬಿಡಿಭಾಗಗಳು ಮತ್ತು ಡ್ರೋನ್ ಉದ್ಯಮಕ್ಕಾಗಿ ₹ 26,058 ಕೋಟಿಯ ಉತ್ಪಾದನೆ ಪ್ರೋತ್ಸಾಹಕ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಉತ್ಪಾದನೆ ಪ್ರೋತ್ಸಾಹಕ ಯೋಜನೆ(ಪಿಎಲ್‌ಐ)ಯು ಭಾರತದಲ್ಲಿ ಸುಧಾರಿತ ಆಟೋಮೋಟಿವ್ ತಂತ್ರಜ್ಞಾನಗಳ ಜಾಗತಿಕ ಪೂರೈಕೆ ಸರಪಳಿಯನ್ನು ಉತ್ತೇಜಿಸುತ್ತದೆ. ಇದು 7.6 ಲಕ್ಷಕ್ಕೂ ಅಧಿಕ ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದರು.

₹ 26,058 ಕೋಟಿ ಪ್ರೋತ್ಸಾಹ ಧನವನ್ನು ಐದು ವರ್ಷಗಳಲ್ಲಿ ಉದ್ಯಮಕ್ಕೆ ಒದಗಿಸಲಾಗುವುದು ಎಂದು ಸಚಿವ ಸಂಪುಟ ಸಭೆಯ ನಂತರ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು.

ಪಿಎಲ್‌ಐ ಯೋಜನೆಯು ಐದು ವರ್ಷಗಳಲ್ಲಿ ₹ 42,500 ಕೋಟಿಗಳಷ್ಟು ಹೊಸ ಹೂಡಿಕೆಯನ್ನು ಮತ್ತು 2.3 ಲಕ್ಷ ಕೋಟಿಗಳಷ್ಟು ಹೆಚ್ಚಿನ ಉತ್ಪಾದನೆಯನ್ನು ತರುತ್ತದೆ ಎಂದು ಅವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು