ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಸಂಗ್ರಹ ಹೆಚ್ಚಿಸಲು ಕ್ರಮ: ಕೇಂದ್ರ ಸರ್ಕಾರ

Last Updated 24 ನವೆಂಬರ್ 2022, 14:42 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಉಷ್ಣವಿದ್ಯುತ್ ಸ್ಥಾವರಗಳಲ್ಲಿನ ಕಲ್ಲಿದ್ದಲು ಸಂಗ್ರಹವನ್ನು ಮಾರ್ಚ್‌ ಅಂತ್ಯಕ್ಕೆ ಮೊದಲು 4.5 ಕೋಟಿ ಟನ್‌ಗೆ ಹೆಚ್ಚಿಸುವ ಯೋಜನೆ ಇದೆ ಎಂದು ಕೇಂದ್ರ ಸರ್ಕಾರವು ಗುರುವಾರ ಹೇಳಿದೆ. ಕಲ್ಲಿದ್ದಲಿನ ದೇಶಿ ಉತ್ಪಾದನೆಯು ಕಳೆದ ಕೆಲವು ತಿಂಗಳಲ್ಲಿ ಹೆಚ್ಚಳ ಕಂಡಿದೆ.

‘ಈ ತಿಂಗಳ ಅಂತ್ಯದ ಹೊತ್ತಿಗೆ ದೇಶದ ಕಲ್ಲಿದ್ದಲು ಆಧಾರಿತ ಉಷ್ಣವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಸಂಗ್ರಹವನ್ನು 3 ಕೋಟಿ ಟನ್‌ಗೆ ಹೆಚ್ಚಿಸುವ ಉದ್ದೇಶ ಕೇಂದ್ರ ಕಲ್ಲಿದ್ದಲು ಸಚಿವಾಲಯಕ್ಕೆ ಇದೆ’ ಎಂದು ಪ್ರಕಟಣೆ ತಿಳಿಸಿದೆ.

ಬೇಸಿಗೆ ಕಾಲದಲ್ಲಿ ಉಷ್ಣವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಕೊರತೆ ತೀವ್ರವಾಗಿತ್ತು. ಇದರಿಂದಾಗಿ ದೇಶದ ಹಲವು ಕಡೆಗಳಲ್ಲಿ ವಿದ್ಯುತ್ ಕಡಿತ ಜಾರಿಗೆ ಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT