ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ, ವಿಶೇಷ ಆಹಾರದ ಮೇಲಿನ ಸುಂಕ ರದ್ದು

Last Updated 30 ಮಾರ್ಚ್ 2023, 16:05 IST
ಅಕ್ಷರ ಗಾತ್ರ

ನವದೆಹಲಿ: ವಿಶೇಷ ವೈದ್ಯಕೀಯ ಉದ್ದೇಶಗಳಿಗೆ ಬಳಸುವ ಆಹಾರ ಪದಾರ್ಥಗಳು ಹಾಗೂ ಔಷಧಗಳ ಆಮದಿನ ಮೇಲೆ ವಿಧಿಸುವ ಮೂಲ ಕಸ್ಟಮ್ಸ್ ಸುಂಕವನ್ನು ಕೇಂದ್ರ ಸರ್ಕಾರವು ರದ್ದುಮಾಡಿದೆ. ಇದು ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ.

ಹಲವು ವಿಧದ ಕ್ಯಾನ್ಸರ್‌ಗಳ ಚಿಕಿತ್ಸೆಯಲ್ಲಿ ಬಳಸುವ ಪೆಂಬ್ರೊಲಿಜುಮ್ಯಾಬ್‌ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಕೂಡ ರದ್ದುಮಾಡಲಾಗಿದೆ. ಔಷಧಗಳಿಗೆ ಸಾಮಾನ್ಯವಾಗಿ ಶೇಕಡ 10ರಷ್ಟು ಮೂಲ ಕಸ್ಟಮ್ಸ್ ಸುಂಕ ವಿಧಿಸಲಾಗುತ್ತದೆ. ಕೆಲವು ಜೀವರಕ್ಷಕ ಔಷಧಗಳಿಗೆ ಶೇ 5ರಷ್ಟು ಸುಂಕ ಇರುತ್ತದೆ.

‘ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ವೈಯಕ್ತಿಕವಾಗಿ ಬಳಕೆ ಮಾಡುವ ಎಲ್ಲ ಔಷಧಗಳು ಹಾಗೂ ವಿಶೇಷ ವೈದ್ಯಕೀಯ ಉದ್ದೇಶದ ಆಹಾರ ಪದಾರ್ಥಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ತೆಗೆದುಹಾಕಲಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT