ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ರಫ್ತು ನಿರ್ಬಂಧ ಅವಧಿ ವಿಸ್ತರಣೆ

Published 18 ಅಕ್ಟೋಬರ್ 2023, 15:39 IST
Last Updated 18 ಅಕ್ಟೋಬರ್ 2023, 15:39 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಸಕ್ಕರೆ ರಫ್ತು ಮೇಲೆ ವಿಧಿಸಿರುವ ನಿರ್ಬಂಧವನ್ನು ಅಕ್ಟೋಬರ್‌ 31ರ ಆಚೆಗೂ ವಿಸ್ತರಣೆ ಮಾಡಿದೆ. ಹಬ್ಬದ ಋತುವಿನಲ್ಲಿ ದೇಶಿ ಮಾರುಕಟ್ಟೆಯಲ್ಲಿ ಸಕ್ಕರೆ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

ಸರ್ಕಾರದ ಈ ಹಿಂದಿನ ಆದೇಶದಲ್ಲಿ ಅಕ್ಟೋಬರ್ 31ರವರೆಗೆ ನಿರ್ಬಂಧ ಹೇರಲಾಗಿತ್ತು. ಆದರೆ, ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯವು ಹೊರಡಿಸಿರುವ ಪ್ರಕಟಣೆಯಲ್ಲಿ 2023ರ ಅಕ್ಟೋಬರ್ 31ರ ಆಚೆಗೂ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ಆದರೆ, ಸುಂಕ ವಿನಾಯಿತಿ ಕೋಟಾದ ಅಡಿ (ಟಿಆರ್‌ಕ್ಯು) ಯುರೋಪ್‌ ಒಕ್ಕೂಟ ಮತ್ತು ಅಮೆರಿಕಕ್ಕೆ ರಫ್ತು ಮಾಡುವುದಕ್ಕೆ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಹೇಳಿದೆ.

ಸಕ್ಕರೆ ರಫ್ತು ಮಾಡಲು ಸರ್ಕಾರದಿಂದ ಲೈಸೆನ್ಸ್ ಪಡೆದುಕೊಳ್ಳಬೇಕಿದೆ. ಲೈಸೆನ್ಸ್‌ ಪಡೆಯುವುದನ್ನು ನಿರ್ಬಂಧದ ವ್ಯಾಪ್ತಿಗೆ ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT