ಶುಕ್ರವಾರ, ಏಪ್ರಿಲ್ 23, 2021
27 °C

ಜಿಎಸ್‌ಟಿ: ವಿವರ ಸಲ್ಲಿಕೆ ಗಡುವು ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2019–20ನೇ ಸಾಲಿನ ಜಿಎಸ್‌ಟಿ ವಾರ್ಷಿಕ ವಿವರ ಸಲ್ಲಿಸಲು ನೀಡಿದ್ದ ಗಡುವನ್ನು ಕೇಂದ್ರ ಸರ್ಕಾರ ಮಾರ್ಚ್‌ 31ರವರೆಗೆ ವಿಸ್ತರಿಸಿದೆ. ಗಡುವು ವಿಸ್ತರಣೆ ಆಗುತ್ತಿರುವುದು ಇದು ಎರಡನೆಯ ಬಾರಿ.

ಈ ಮೊದಲು ಗಡುವನ್ನು ಫೆಬ್ರುವರಿ 28ರವರೆಗೆ ವಿಸ್ತರಿಸಲಾಗಿತ್ತು. ‘ತೆರಿಗೆ ಪಾವತಿದಾರರು ಎದುರಿಸುತ್ತಿರುವ ಕಷ್ಟವನ್ನು ಪರಿಗಣಿಸಿ, ಚುನಾವಣಾ ಆಯೋಗದ ಅನುಮತಿಯೊಂದಿಗೆ, ಜಿಎಸ್‌ಟಿ ವಿವರ ಸಲ್ಲಿಸುವ ಗಡುವನ್ನು ವಿಸ್ತರಿಸಲಾಗುತ್ತಿದೆ’ ಎಂದು ಕೇಂದ್ರ ಹಣಕಾಸು ಸಚಿವಾಲಯದ ಪ್ರಕಟಣೆ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು