ಸೋಮವಾರ, ಜೂನ್ 27, 2022
22 °C

ಐ.ಟಿ. ವಿವರ ಸಲ್ಲಿಕೆ ಗಡುವು ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆದಾಯ ತೆರಿಗೆ ವ್ಯಾಪ್ತಿಗೆ ಬರುವ ವ್ಯಕ್ತಿಗಳು 2020–21ನೇ ಸಾಲಿನ ಆದಾಯ ತೆರಿಗೆ ವಿವರ ಸಲ್ಲಿಸುವುದಕ್ಕೆ ಇದ್ದ ಕಡೆಯ ದಿನಾಂಕವನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ಆದಾಯ ತೆರಿಗೆ ವಿವರ ಸಲ್ಲಿಸಲು ಕಂಪನಿಗಳಿಗೆ ಇರುವ ಗಡುವನ್ನು ನವೆಂಬರ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ.

ಸಾಮಾನ್ಯವಾಗಿ, ವ್ಯಕ್ತಿಗಳು ಜುಲೈ 31ರೊಳಗೆ, ಕಂಪನಿಗಳು ಅಕ್ಟೋಬರ್ 31ರೊಳಗೆ ತಮ್ಮ ಆದಾಯ ತೆರಿಗೆ ವಿವರ ಸಲ್ಲಿಸಬೇಕು. ‘ಸಾಂಕ್ರಾಮಿಕವು ತೀವ್ರವಾಗಿರುವ ಕಾರಣ, ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಈ ಗಡುವು ವಿಸ್ತರಿಸಲಾಗಿದೆ’ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಹೇಳಿದೆ. ಉದ್ಯೋಗದಾತರು ಉದ್ಯೋಗಿಗಳಿಗೆ ಫಾರ್ಮ್‌–16 ನೀಡುವುದಕ್ಕೆ ಇರುವ ಗಡುವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು