ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೀಸೆಲ್‌, ಎಟಿಎಫ್‌ ರಫ್ತು ಮೇಲಿನ ಆಕಸ್ಮಿಕ ಲಾಭ ತೆರಿಗೆ ಹೆಚ್ಚಳ

atf, windfall tax
Last Updated 1 ಸೆಪ್ಟೆಂಬರ್ 2022, 11:38 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಗುರುವಾರದಿಂದ ಜಾರಿಗೆ ಬರುವಂತೆ ಡೀಸೆಲ್‌ ಮತ್ತು ಎಟಿಎಫ್‌ ರಫ್ತು ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಹೆಚ್ಚಿಸಿದೆ. ಅಂತೆಯೇ ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ತೆರಿಗೆಯನ್ನು ಸಹ ಹೆಚ್ಚಿಸಲಾಗಿದೆ.

ಡೀಸೆಲ್‌ ರಫ್ತು ಮೇಲಿನ ತೆರಿಗೆಯು ಪ್ರತಿ ಲೀಟರಿಗೆ ₹ 7 ಇದ್ದಿದ್ದು ₹ 13.5ಕ್ಕೆ ಏರಿಕೆ ಆಗಿದೆ. ಎಟಿಎಫ್‌ ರಫ್ತು ಮೇಲಿನ ತೆರಿಗೆ ₹ 2 ಇದ್ದಿದ್ದು ₹ 9ಕ್ಕೆ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಬುಧವಾರ ರಾತ್ರಿ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ತೆರಿಗೆಯನ್ನು ಪ್ರತಿ ಟನ್‌ಗೆ ₹13,300ಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು ₹ 13 ಸಾವಿರ ಇತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ. ಪ್ರತಿ 15 ದಿನಕ್ಕೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT