ನವದೆಹಲಿ (ಪಿಟಿಐ): ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಕೇಂದ್ರ ಸರ್ಕಾರವು ಶನಿವಾರದಿಂದ ಜಾರಿಗೆ ಬರುವಂತೆ ಹೆಚ್ಚಿಸಿದೆ. ಆದರೆ ಡೀಸೆಲ್ ಹಾಗೂ ವಿಮಾನ ಇಂಧನ (ಎಟಿಎಫ್) ರಫ್ತು ಮೇಲಿನ ತೆರಿಗೆಯನ್ನು ಇಳಿಕೆ ಮಾಡಿದೆ.

ದೇಶದಲ್ಲಿ ತಯಾರಾಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ ₹6,700 ರಿಂದ ₹10 ಸಾವಿರಕ್ಕೆ ಏರಿಕೆ ಮಾಡಿದೆ.

ಡೀಸೆಲ್ ರಫ್ತು ಮೇಲಿನ ತೆರಿಗೆಯನ್ನು ಪ್ರತಿ ಲೀಟರಿಗೆ ₹6 ರಿಂದ ₹5.50ಕ್ಕೆ ಇಳಿಕೆ ಮಾಡಲಾಗಿದೆ. ಅದೇ ರೀತಿ ವಿಮಾನ ಇಂಧನದ (ಎಟಿಎಫ್) ಮೇಲಿನ ತೆರಿಗೆಯನ್ನು ಪ್ರತಿ ಲೀಟರಿಗೆ ₹4ರಿಂದ ₹3.5ಕ್ಕೆ ತಗ್ಗಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಪೆಟ್ರೋಲ್ ರಫ್ತು ಮೇಲೆ ಶೂನ್ಯ ತೆರಿಗೆಯನ್ನು ಮುಂದುವರಿಸಲಾಗಿದೆ.

ಹಿಂದಿನ ಎರಡು ವಾರಗಳಲ್ಲಿ ಇಂಧನದ ಸರಾಸರಿ ದರದ ಆಧಾರದ ಮೇಲೆ ಪ್ರತಿ 15 ದಿನಗಳಿಗೆ ಒಮ್ಮೆ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. 2022ರ ಜುಲೈ 1ರಂದು ಮೊದಲಿಗೆ ಆಕಸ್ಮಿಕ ಲಾಭ ತೆರಿಗೆಯನ್ನು ಜಾರಿಗೊಳಿಸಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.