ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಎಂಇ ವ್ಯಾಪ್ತಿಗೆ ಸಗಟು, ಚಿಲ್ಲರೆ ವ್ಯಾಪಾರ ವಲಯ

Last Updated 2 ಜುಲೈ 2021, 15:19 IST
ಅಕ್ಷರ ಗಾತ್ರ

ನವದೆಹಲಿ: ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್‌ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗುತ್ತದೆ.

‘ಈ ಎರಡು ವ್ಯಾಪಾರ ವಲಯಗಳನ್ನು ಎಂಎಸ್‌ಎಂಇ ಎಂಬ ವ್ಯಾಖ್ಯಾನದಿಂದ ಹೊರಗೆ ಇರಿಸಲಾಗಿತ್ತು. ಆದರೆ ಈಗ ಪರಿಷ್ಕೃತ ಮಾರ್ಗಸೂಚಿ ಪ್ರಕಾರ ಈ ಎರಡು ವಲಯದವರು ಕೂಡ ಆದ್ಯತೆಯ ಆಧಾರದಲ್ಲಿ ಸಾಲ ಪಡೆಯಬಹುದು’ ಎಂದು ಗಡ್ಕರಿ ಹೇಳಿದ್ದಾರೆ.

ಹೊಸ ಮಾರ್ಗಸೂಚಿಯಿಂದಾಗಿ ಸಗಟು ಮತ್ತು ಚಿಲ್ಲರೆ ವ್ಯಾಪಾರ ವಲಯದ 2.5 ಕೋಟಿ ವರ್ತಕರಿಗೆ ಪ್ರಯೋಜನ ಆಗಲಿದೆ. ಅವರಿಗೆ ತಮ್ಮನ್ನು ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT