ಗುರುವಾರ , ಮೇ 6, 2021
31 °C

ಓರಿಯಂಟಲ್ ಇನ್ಶೂರೆನ್ಸ್ ಅಥವಾ ಯನೈಟೆಡ್ ಇಂಡಿಯಾ ಖಾಸಗಿಯವರಿಗೆ ಮಾರಾಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಓರಿಯಂಟಲ್‌ ಇನ್ಶೂರೆನ್ಸ್‌ ಅಥವಾ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಪರಿಗಣಿಸುವ ಸಾಧ್ಯತೆ ಇದೆ. ಬಂಡವಾಳ ನೆರವು ನೀಡಿದ ಬಳಿಕ ಈ ಎರಡು ಕಂಪನಿಗಳ ಹಣಕಾಸಿನ ಸ್ಥಿತಿ ಉತ್ತಮ ಆಗಿರುವುದು ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.

ಈ ಕಂಪನಿಗಳ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರವು ಹಾಲಿ ತ್ರೈಮಾಸಿಕದಲ್ಲಿ ₹ 3 ಸಾವಿರ ಕೋಟಿ ಬಂಡವಾಳ ಒದಗಿಸುವ ಸಾಧ್ಯತೆ ಇದೆ. ಆರ್ಥಿಕ ಆರೋಗ್ಯ ಉತ್ತಮಗೊಳ್ಳುವ ಕಾರಣ ಎರಡೂ ಕಂಪನಿಗಳು ಖಾಸಗಿ ಕಂಪನಿಗಳಲ್ಲಿ ಆಸಕ್ತಿ ಮೂಡಿಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಖಾಸಗಿಯವರಿಗೆ ಮಾರಾಟ ಮಾಡಲು ಸೂಕ್ತ ಕಂಪನಿ ಯಾವುದು ಎಂಬುದನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಈಗಷ್ಟೇ ಶುರುವಾಗಿದೆ. ತೀರ್ಮಾನ ತೆಗೆದುಕೊಳ್ಳಲು ತುಸು ಸಮಯ ಬೇಕಾಗಬಹುದು. ಷೇರು ಮಾರುಕಟ್ಟೆಯಲ್ಲಿ ನೋಂದಾಯಿತ ಆಗಿರುವ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡುವ ಸಾಧ್ಯತೆ ಇಲ್ಲ ಎಂದು ಅವರು ಹೇಳಿದ್ದಾರೆ.

ಖಾಸಗೀಕರಣದ ವಿಚಾರದಲ್ಲಿ ನೀತಿ ಆಯೋಗವು ಸರ್ಕಾರಕ್ಕೆ ಶಿಫಾರಸು ಸಲ್ಲಿಸಲಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ ಕೆಲಸ ನಿರ್ವಹಿಸುವ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು ಈ ಶಿಫಾರಸನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಿದೆ. ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳು ಹಾಗೂ ಒಂದು ವಿಮಾ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

ಬಂಡವಾಳ ಹಿಂತೆಗೆತದ ಭಾಗವಾಗಿ ಭಾರತೀಯ ಜೀವವಿಮಾ ಕಂಪನಿಯ (ಎಲ್‌ಐಸಿ) ಷೇರುಗಳನ್ನು ಸಾರ್ವಜನಿಕರ ಖರೀದಿಗೆ ಮುಕ್ತವಾಗಿಸುವ (ಐಪಿಒ) ಪ್ರಕ್ರಿಯೆ ಕೂಡ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು