ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಡಿಸಿಯ ಉಕ್ಕು ಘಟಕ ಮಾರಾಟಕ್ಕೆ ಬಿಡ್‌ ಸಾಧ್ಯತೆ

Last Updated 4 ಸೆಪ್ಟೆಂಬರ್ 2022, 18:23 IST
ಅಕ್ಷರ ಗಾತ್ರ

ನವದೆಹಲಿ: ಎನ್‌ಎಂಡಿಸಿಯ ಉಕ್ಕು ಘಟಕವನ್ನು ಮಾರಾಟ ಮಾಡುವ ಸಂಬಂಧ ಕೇಂದ್ರ ಸರ್ಕಾರವು ಮಾರ್ಚ್ ಅಂತ್ಯದ ವೇಳೆಗೆ ಪ್ರಾಥಮಿಕ ಬಿಡ್‌ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಛತ್ತೀಸಗಡದಲ್ಲಿ ನಿರ್ಮಾಣ ಹಂತದಲ್ಲಿ ಇರುವ ಈ ಉಕ್ಕು ಘಟಕವು ಇದೇ ತಿಂಗಳಿನಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಎನ್‌ಎಂಡಿಸಿಯಿಂದ ನಗರ್ನಾರ್ ಸ್ಟೀಲ್‌ ಪ್ಲಾಂಟ್‌ (ಎನ್‌ಎಸ್‌ಪಿ) ಅನ್ನು ಪ್ರತ್ಯೇಕಿಸಿದ ಬಳಿಕ ಘಟಕವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಕೈಗೆತ್ತಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಹಣಕಾಸು ವರ್ಷದಲ್ಲಿ ಮಾರಾಟ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT