ಗುರುವಾರ , ಸೆಪ್ಟೆಂಬರ್ 23, 2021
26 °C

ಪೆಟ್ರೋಲ್‌ ಪಂಪ್‌ಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌‌ ಅಳವಡಿಸಲು ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದ್ಯುತ್‌ ಚಾಲಿತ ವಾಹನಗಳ (ಇವಿ) ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರವು 69 ಸಾವಿರ ಪೆಟ್ರೋಲ್ ಪಂಪ್‌ಗಳಲ್ಲಿ ಚಾರ್ಜಿಂಗ್‌ ಕಿಯೋಸ್ಕ್‌ ಅಳವಡಿಸುವ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ನಿರ್ವಹಣೆಯಲ್ಲಿ ಇರುವ ಮತ್ತು ಅವುಗಳ ಒಡೆತನದಲ್ಲಿ ಇರುವ ಪೆಟ್ರೋಲ್‌ ಪಂಪ್‌ಗಳಲ್ಲಿ ಕಿಯೋಸ್ಕ್‌ ಅಳವಡಿಕೆಯನ್ನು ಕಡ್ಡಾಯಗೊಳಿಸುವ ಕುರಿತಾಗಿ ಕೇಂದ್ರ ಚಿಂತನೆ ನಡೆಸುತ್ತಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಡೆಸುತ್ತಿರುವ ಪೆಟ್ರೋಲ್‌ ಪಂಪ್‌ಗಳಲ್ಲಿ ಕಿಯೋಸ್ಕ್‌ ಅಳವಡಿಸಲು ಆದೇಶ ಹೊರಡಿಸಬಹುದು ಎಂದು ಕೇಂದ್ರ ಇಂಧನ ಸಚಿವ ಆರ್‌.ಕೆ. ಸಿಂಗ್ ಅವರು ಭಾನುವಾರ ನಡೆದ ಸಭೆಯಲ್ಲಿ ಪೆಟ್ರೋಲಿಯಂ ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಖಾಸಗಿ ಒಡೆತನದ ಪೆಟ್ರೋಲ್‌ ಪಂಪ್‌ಗಳಲ್ಲಿಯೂ ಕನಿಷ್ಠ ಒಂದು ಕಿಯೋಸ್ಕ್‌ ಅಳವಡಿಸುವಂತೆ ಸರ್ಕಾರವು ಸಲಹೆ ನೀಡಲಿದೆ ಎಂದು ಮೂಲಗಳು ವಿವರಿಸಿವೆ.

ಬಹುತೇಕ ಹೊಸ ಪೆಟ್ರೋಲ್‌ ಪಂಪ್‌ಗಳು ವಿದ್ಯುತ್‌ ಚಾಲಿತ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆಗೆ ಅಳವಡಿಕೆಗೆ ಗಮನ ನೀಡುತ್ತಿವೆ. ಆದರೆ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್‌ ಪಂಪ್‌ಗಳೂ ಇಂತಹ ಕಿಯೋಸ್ಕ್‌ ಅಳವಡಿಸಿದರೆ ಇ.ವಿ.ಗಳ ಬಳಕೆಗೆ ಹೆಚ್ಚಿನ ಉತ್ತೇಜನ ಸಿಗಲಿದೆ.

ಬೆಂಗಳೂರು, ದೆಹಲಿ ರಾಜಧಾನಿ ಪ್ರದೇಶ, ಕೋಲ್ಕತ್ತ, ಚೆನ್ನೈ, ಹೈದರಾಬಾದ್‌, ವಡೋದರಾ ಮತ್ತು ಭೋಪಾಲ್‌ನಲ್ಲಿ ಇವಿ ಚಾರ್ಜಿಂಗ್‌ ಮೂಲಸೌಕರ್ಯ ಸೃಷ್ಟಿಸುವ ಕುರಿತು ಇಂಧನ ಸಚಿವಾಲಯವು ಯೋಜನೆ ರೂಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು