ಶುಕ್ರವಾರ, ಏಪ್ರಿಲ್ 3, 2020
19 °C

ಬಿಪಿಸಿಎಲ್ ಖಾಸಗೀಕರಣಕ್ಕೆ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. (ಬಿಪಿಸಿಎಲ್) ಸೇರಿದಂತೆ ಸಾರ್ವಜನಿಕ ವಲಯದ ಐದು ಕಂಪನಿಗಳ ಷೇರು ಮಾರಾಟ ಮಾಡಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ. ಬಿಪಿಸಿಎಲ್‌ನಲ್ಲಿ ಹೊಂದಿರುವ ಒಟ್ಟಾರೆ ಷೇರಿನಲ್ಲಿ ಶೇ 53.29ರಷ್ಟನ್ನು ಮಾರಾಟ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಸಿಐ), ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ ಷೇರುಗಳನ್ನೂ ಸರ್ಕಾರ ಮಾರಾಟ ಮಾಡಲಿದೆ. 

ಟಿಎಚ್‌ಡಿಸಿ ಇಂಡಿಯಾ ಮತ್ತು ನಾರ್ತ್‌ ಈಸ್ಟ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ನ ಪಾಲನ್ನು ಸರ್ಕಾರಿ ಸ್ವಾಮ್ಯದ ಎನ್‌ಟಿಪಿಸಿಗೆ ನೀಡಲಿದೆ. ಸರ್ಕಾರದ ನಿಯಂತ್ರಣ ಉಳಿಸಿಕೊಂಡು ಆಯ್ದ ಕಂಪನಿಗಳ ಷೇರು ಪಾಲನ್ನು ಶೇ 51ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು