ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಿ ನೀತಿ ಅಡಿ ಇನ್ನಷ್ಟು ವಿನಾಯಿತಿ ನೀಡುವ ಬಗ್ಗೆ ಪರಿಶೀಲನೆ: ನಿತಿನ್ ಗಡ್ಕರಿ

Last Updated 23 ನವೆಂಬರ್ 2021, 16:03 IST
ಅಕ್ಷರ ಗಾತ್ರ

ನವದೆಹಲಿ: ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಈಚೆಗೆ ಜಾರಿಗೆ ತಂದಿರುವ ರಾಷ್ಟ್ರೀಯ ವಾಹನ ಗುಜರಿ ನೀತಿ ಅನ್ವಯ ಇನ್ನೂ ಹೆಚ್ಚಿನ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.

ಕೇಂದ್ರ ಸರ್ಕಾರದ ಮಾನ್ಯತೆ ಪಡೆದಿರುವ ಮೊದಲ ಗುಜರಿ ಘಟಕ ಮಾರುತಿ ಸುಜುಕಿ ಟೊಯೊಟ್ಸು ಉದ್ಘಾಟನಾ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು. ‘ಹೊಸ ಗುಜರಿ ನೀತಿಯ ಅಡಿಯಲ್ಲಿ ಹೆಚ್ಚಿನ ತೆರಿಗೆ ವಿನಾಯಿತಿ ನೀಡುವುದು ಹೇಗೆ ಎಂಬ ಬಗ್ಗೆ ನಾನು ಹಣಕಾಸು ಸಚಿವಾಲಯದ ಜೊತೆ ಮಾತುಕತೆ ನಡೆಸಲಿದ್ದೇನೆ’ ಎಂದು ಗಡ್ಕರಿ ಹೇಳಿದರು.

ಹಳೆಯ ವಾಹನವನ್ನು ಗುಜರಿಗೆ ಹಾಕಿದ ನಂತರ ಖರೀದಿಸುವ ಹೊಸ ವಾಹನಕ್ಕೆ ರಸ್ತೆ ತೆರಿಗೆಯ ಮೇಲೆ ರಾಜ್ಯ ಸರ್ಕಾರಗಳು ಶೇಕಡ 25ರವರೆಗೆ ವಿನಾಯಿತಿ ನೀಡಲಿವೆ ಎಂದು ಗಡ್ಕರಿ ತಿಳಿಸಿದರು. ಹೆಚ್ಚಿನ ವಿನಾಯಿತಿ ನೀಡುವ ಬಗ್ಗೆ ಅಂತಿಮ ತೀರ್ಮಾನವನ್ನು ಹಣಕಾಸು ಸಚಿವಾಲಯ ಹಾಗೂ ಜಿಎಸ್‌ಟಿ ಮಂಡಳಿ ಕೈಗೊಳ್ಳಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT