ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುಕಟ್ಟೆಯಿಂದ ₹7.5 ಲಕ್ಷ ಕೋಟಿ ಸಂಗ್ರಹಕ್ಕೆ ನಿರ್ಧಾರ

Published 27 ಮಾರ್ಚ್ 2024, 14:22 IST
Last Updated 27 ಮಾರ್ಚ್ 2024, 14:22 IST
ಅಕ್ಷರ ಗಾತ್ರ

ನವದೆಹಲಿ: 2024–25ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿ) ₹7.5 ಲಕ್ಷ ಕೋಟಿಯನ್ನು ಮಾರುಕಟ್ಟೆಯಿಂದ ಸಂಗ್ರಹಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಆದಾಯದ ಅಂತರವನ್ನು ಸರಿದೂಗಿಸಿ ಆರ್ಥಿಕತೆಯ ಬೆಳವಣಿಗೆಗೆ ಉತ್ತೇಜನ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಬುಧವಾರ ತಿಳಿಸಿದೆ.

ಹಣಕಾಸು ವರ್ಷದಲ್ಲಿ ಒಟ್ಟು ₹14.13 ಲಕ್ಷ ಕೋಟಿ ಮೊತ್ತವನ್ನು ಬಾಂಡ್‌ಗಳ ಮೂಲಕ ಸಂಗ್ರಹಿಸಲಾಗುವುದು ಎಂದು ಕೇಂದ್ರದ ಮಧ್ಯಂತರ ಬಜೆಟ್‌ನಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದರು. ಈ ಪೈಕಿ ಮೊದಲಾರ್ಧದಲ್ಲಿ ಶೇ 53ರಷ್ಟು ಮೊತ್ತವನ್ನು ಸಂಗ್ರಹಿಸಲಿದೆ.  ‌

2022–23ನೇ ಹಣಕಾಸು ವರ್ಷದಲ್ಲಿ ಕೇಂದ್ರವು ಮಾರುಕಟ್ಟೆಯಿಂದ ಒಟ್ಟು ₹15.43 ಲಕ್ಷ ಕೋಟಿ ಸಂಗ್ರಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT