ಮಂಗಳವಾರ, ಫೆಬ್ರವರಿ 7, 2023
27 °C

ಸರ್ಕಾರಿ ಬ್ಯಾಂಕ್‌ಗಳ ಸಿಇಒ ಅವಧಿ ಗರಿಷ್ಠ 10 ವರ್ಷಕ್ಕೆ ಏರಿಕೆ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕರ ಸೇವಾ ಅವಧಿಯನ್ನು ಗರಿಷ್ಠ 10 ವರ್ಷಗಳವರೆಗೆ ಹೆಚ್ಚಿಸಲಾಗಿದೆ.

ಕೇಂದ್ರ ಸರ್ಕಾರವು ನವೆಂಬರ್‌ 17ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ನೇಮಕಾತಿ ಅವಧಿಯನ್ನು 5 ವರ್ಷಗಳಿಂದ 10 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಇದು 60 ವರ್ಷಗಳ ನಿವೃತ್ತಿ ವಯಸ್ಸಿನ ಮಿತಿಗೆ ಒಳಪಟ್ಟಿದೆ.

ಈ ಮೊದಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಿಇಒ ಅವಧಿಯು ಗರಿಷ್ಠ 5 ವರ್ಷ ಅಥವಾ 60 ವರ್ಷ ವಯಸ್ಸು; ಇವುಗಳಲ್ಲಿ ಯಾವುದು ಮೊದಲೋ ಅದು ಅನ್ವಯವಾಗುವಂತೆ ಇತ್ತು. 

ಎಲ್ಲ ಕೇಂದ್ರೋದ್ಯಮಗಳ ಪೂರ್ಣಾವಧಿ ನಿರ್ದೇಶಕರಿಗೂ ಇದು ಅನ್ವಯ ಆಗುತ್ತದೆ. ಉತ್ತಮ ಪ್ರತಿಭೆಗಳನ್ನು ಬ್ಯಾಂಕಿಂಗ್‌ ವಲಯದಲ್ಲಿ ಉಳಿಸಿಕೊಳ್ಳಲು ಈ ನಿರ್ಧಾರವು ಸರ್ಕಾರಕ್ಕೆ ನೆರವಾಗಲಿದೆ.

ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಪೂರ್ಣಾವಧಿ ನಿರ್ದೇಶಕರು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಆರಂಭಿಕವಾಗಿ ಐದು ವರ್ಷಗಳನ್ನು ಮೀರದಂತೆ ಅಧಿಕಾರದಲ್ಲಿ ಇರಬಹುದು. ಆ ಬಳಿಕ ಕೇಂದ್ರ ಸರ್ಕಾರವು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಸಲಹೆಯ ಮೇರೆಗೆ ಮತ್ತೆ ಗರಿಷ್ಠ ಐದು ವರ್ಷಗಳ ಅವಧಿಗೆ ಮರು ನೇಮಕ ಮಾಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

45ರಿಂದ 50 ವರ್ಷ ವಯಸ್ಸಿನಲ್ಲಿ ಇರುವಾಗಲೇ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಆಡಳಿತ ಮಂಡಳಿಯಲ್ಲಿ ಪೂರ್ಣಾವಧಿ ನಿರ್ದೇಶಕರಾದವರಿಗೆ ಈ ತಿದ್ದುಪಡಿಯಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು