ನವದೆಹಲಿ: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ (ಪಿಎಂಜೆಜೆಬಿವೈ) ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯ (ಪಿಎಂಎಸ್‌ಬಿವೈ) ಪ್ರೀಮಿಯಂ ಮೊತ್ತವನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ.
ಪಿಎಂಜೆಜೆಬಿವೈ ಯೋಜನೆಯ ವಾರ್ಷಿಕ ಪ್ರೀಮಿಯಂ ಮೊತ್ತವು ₹ 436ಕ್ಕೆ ಹೆಚ್ಚಳವಾಗಿದೆ. ಇದು ₹ 330 ಆಗಿತ್ತು. ಪಿಎಂಎಸ್‌ಬಿವೈ ಯೋಜನೆಯ ವಾರ್ಷಿಕ ಪ್ರೀಮಿಯಂ ಮೊತ್ತವನ್ನು ₹ 20ಕ್ಕೆ ಏರಿಕೆ ಮಾಡಲಾಗಿದೆ. ಇದು ಮೊದಲು ₹ 12 ಆಗಿತ್ತು. ಹೊಸ ದರವು ಜೂನ್ 1ರಿಂದ ಜಾರಿಗೆ ಬರಲಿದೆ.