ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯ್ದ ಸಣ್ಣ ಉಳಿತಾಯ ಯೋಜನೆಗಳ ನಿಯಮ ಸಡಿಲ

Published 10 ನವೆಂಬರ್ 2023, 16:21 IST
Last Updated 10 ನವೆಂಬರ್ 2023, 16:21 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು, ಹಿರಿಯ ನಾಗರಿಕ ಉಳಿತಾಯ ಯೋಜನೆ ಮತ್ತು ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್‌) ಯೋಜನೆಗೆ ಸಂಬಂಧಿಸಿದ ನಿಯಮಗಳನ್ನು ತುಸು ಸಡಿಲಿಸಿದೆ.

ಹೊಸ ನಿಯಮದ ಪ್ರಕಾರ, ಹಿರಿಯ ನಾಗರಿಕ ಉಳಿತಾಯ ಯೋಜನೆಯ ಖಾತೆ ತೆರೆಯಲು ಈಗಿರುವ ಒಂದು ತಿಂಗಳ ಬದಲಾಗಿ ಮೂರು ತಿಂಗಳ ಅವಕಾಶ ನೀಡಲಾಗಿದೆ. ನವೆಂಬರ್ 9ರ ಅಧಿಸೂಚನೆಯ ಪ್ರಕಾರ, ಒಬ್ಬ ವ್ಯಕ್ತಿಯು ನಿವೃತ್ತಿ ಪ್ರಯೋಜನಗಳನ್ನು ಸ್ವೀಕರಿಸಿದ ಮತ್ತು ನಿವೃತ್ತಿ ಪ್ರಯೋಜನಗಳ ವಿತರಣೆಯ ದಿನಾಂಕಕ್ಕೆ ಸಂಬಂಧಿಸಿದ ದಾಖಲೆ ಪಡೆದುಕೊಂಡ ಮೂರು ತಿಂಗಳೊಳಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆಯಡಿ ಖಾತೆಯನ್ನು ತೆರೆಯಬಹುದು. 

ಅಂತಹ ಖಾತೆಯಲ್ಲಿನ ಠೇವಣಿಯನ್ನು, ಅವಧಿ ಮುಕ್ತಾಯದ  ದಿನಾಂಕ ಅಥವಾ ವಿಸ್ತೃತ ಅವಧಿಯ ಮುಕ್ತಾಯದ ದಿನಾಂಕದಂದು ಯೋಜನೆಗೆ ಅನ್ವಯವಾಗುವ ದರದಲ್ಲಿ ಬಡ್ಡಿ ಸಿಗಲಿದೆ ಎಂದು ಅಧಿಸೂಚನೆ ತಿಳಿಸಿದೆ.

ರಾಷ್ಟ್ರೀಯ ಉಳಿತಾಯ ಅವಧಿ ಠೇವಣಿ ಯೋಜನೆಯಲ್ಲಿ ಅವಧಿಗೂ ಮುನ್ನ ಹಣ ಹಿಂಪಡೆಯುವ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಐದು ವರ್ಷಗಳ ಖಾತೆಯಲ್ಲಿನ ಠೇವಣಿಯನ್ನು ಖಾತೆ ತೆರೆದ ದಿನಾಂಕದಿಂದ ನಾಲ್ಕು ವರ್ಷಗಳ ನಂತರ ಹಿಂಪಡೆದರೆ, ಅಂಚೆ ಕಚೇರಿಯ ಉಳಿತಾಯ ಖಾತೆಗೆ ಅನ್ವಯವಾಗುವ ದರದಲ್ಲಿ ಬಡ್ಡಿಯನ್ನು ಪಾವತಿಸಲಾಗುವುದು.

ಹಾಲಿ ಇರುವ ನಿಯಮಗಳ ಪ್ರಕಾರ, ಠೇವಣಿ ಮಾಡಿದ ದಿನಾಂಕದಿಂದ ನಾಲ್ಕು ವರ್ಷಗಳ ನಂತರ ಖಾತೆಯನ್ನು ಮುಚ್ಚಿದರೆ, ಮೂರು ವರ್ಷಗಳ ಅವಧಿ ಠೇವಣಿ ಖಾತೆಗೆ ಅನ್ವಯಿಸುವ ದರದಲ್ಲಿ ಬಡ್ಡಿಯನ್ನು ಲೆಕ್ಕಾಚಾರ ಹಾಕಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT