ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಗರಿ, ಉದ್ದು ಆಮದಿಗೆ ನಿರ್ಬಂಧ ಸಡಿಲ

Published 28 ಡಿಸೆಂಬರ್ 2023, 16:31 IST
Last Updated 28 ಡಿಸೆಂಬರ್ 2023, 16:31 IST
ಅಕ್ಷರ ಗಾತ್ರ

ನವದೆಹಲಿ: 2025ರ ಮಾರ್ಚ್‌ವರೆಗೆ ತೊಗರಿ ಮತ್ತು ಉದ್ದಿನ ಬೇಳೆಯ ಆಮದಿಗೆ ಸಂಬಂಧಿಸಿದಂತೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಬೆಲೆ ನಿಯಂತ್ರಣದ ಮೂಲಕ ಸ್ಥಳೀಯ ಮಾರುಕಟ್ಟೆಗೆ ಚೈತನ್ಯ ತುಂಬಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ತೊಗರಿ ಮತ್ತು ಉದ್ದಿನ ಬೇಳೆಯನ್ನು ಕೇಂದ್ರ ಸರ್ಕಾರವು ಆಮದು ನಿರ್ಬಂಧಗಳ ಪಟ್ಟಿಯಿಂದ ಹೊರಗಿಟ್ಟಿದೆ. 

‘ಈ ಎರಡು ಸರಕುಗಳನ್ನು 2024ರ ಮಾರ್ಚ್‌ 31ರವರೆಗೂ ಮುಕ್ತ ಆಮದು ನೀತಿಯಡಿ ಇಡಲಾಗಿತ್ತು. ಮತ್ತೆ ಈ ಅವಧಿಯನ್ನು ವಿಸ್ತರಿಸಲಾಗಿದೆ’ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ) ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT