ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀಕರಿಸಬಹುದಾದ ಇಂಧನ ಉತ್ಪಾದನೆ ಹೆಚ್ಚಳಕ್ಕೆ ಒತ್ತು: ಜೋಶಿ

Published 11 ಜೂನ್ 2024, 15:11 IST
Last Updated 11 ಜೂನ್ 2024, 15:11 IST
ಅಕ್ಷರ ಗಾತ್ರ

ಮುಂಬೈ: ‘ದೇಶದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಪ್ರಮಾಣ ಹೆಚ್ಚಿಸಲು ಸರ್ಕಾರ ಒತ್ತು ನೀಡಲಿದೆ’ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಮಂಗಳವಾರ ಅಧಿಕಾರವಹಿಸಿಕೊಂಡ ಬಳಿಕ ಮಾತನಾಡಿದ ಅವರು, ‘ದೇಶದ ಇಂಧನ ಉತ್ಪಾದನೆಯ ಮೂಲಗಳ ಪೈಕಿ ನವೀಕರಿಸಬಹುದಾದ ಇಂಧನದ ಕೊಡುಗೆ ಹೆಚ್ಚಿಸಲು ಕ್ರಮವಹಿಸಲಾಗುವುದು’ ಎಂದರು. 

‘ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನವೀಕರಿಸಬಹುದಾದ ಇಂಧನ ವಲಯವು ಸಾಕಷ್ಟು ಅಭಿವೃದ್ಧಿ ಕಂಡಿದೆ. ಜಾಗತಿಕಮಟ್ಟದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯದಲ್ಲಿ ಭಾರತವು ನಾಲ್ಕನೇ ಅತಿದೊಡ್ಡ ರಾಷ್ಟ್ರವಾಗಿದೆ’ ಎಂದು ತಿಳಿಸಿದರು.

‘ಮೋದಿ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಈ ಸಚಿವಾಲಯದ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ’ ಎಂದು ಭರವಸೆ ನೀಡಿದರು.

‘ರಾಷ್ಟ್ರದ ಇಂಧನ ಭದ್ರತೆಗೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ವಲಯವು ಕೊಡುಗೆ ನೀಡುತ್ತಿದೆ. ಇದನ್ನು ಮುಂದುವರಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT