ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 5 ಲಕ್ಷ ವರೆಗಿನ ತೆರಿಗೆ ಮರುಪಾವತಿ: ಐ.ಟಿ ಇಲಾಖೆ ಕ್ರಮ

Last Updated 8 ಏಪ್ರಿಲ್ 2020, 16:04 IST
ಅಕ್ಷರ ಗಾತ್ರ

ನವದೆಹಲಿ: ವೈಯಕ್ತಿಕ ಆದಾಯ ತೆರಿಗೆದಾರರಿಗೆ ₹ 5 ಲಕ್ಷದವರೆಗೆ ಮರು ಪಾವತಿಸಲಿರುವ ಬಾಕಿ ಮೊತ್ತವನ್ನು ತಕ್ಷಣಕ್ಕೆ ಬಿಡುಗಡೆ ಮಾಡುವುದಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಇದರಿಂದ 14 ಲಕ್ಷ ತೆರಿಗೆದಾರರಿಗೆ ಪ್ರಯೋಜನವಾಗಲಿದೆ. ಜಿಎಸ್‌ಟಿ ಮತ್ತು ಕಸ್ಟಮ್ಸ್‌ ರೀಫಂಡ್‌ನ ₹ 18 ಸಾವಿರ ಕೋಟಿ ಮೊತ್ತದ ಬಾಕಿಯನ್ನೂ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಕಿರು, ಸಣ್ಣ ಮತ್ತು ಮಧ್ಯಮ (ಎಂಎಸ್‌ಎಂಇ) ಕೈಗಾರಿಕೆಗಳು ಸೇರಿದಂತೆ 1 ಲಕ್ಷ ಉದ್ದಿಮೆ ಸಂಸ್ಥೆಗಳಿಗೆ ಲಾಭವಾಗಲಿದೆ.

ಕೋವಿಡ್‌ ಬಿಕ್ಕಟ್ಟಿನ ಕಾರಣಕ್ಕೆ ತೆರಿಗೆದಾರರು ಮತ್ತು ವಹಿವಾಟುದಾರರಿಗೆ ತಕ್ಷಣ ಪರಿಹಾರ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT