ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಬ್ಯಾಂಕ್‌ಗಳಿಗೆ ಬಂಡವಾಳ ನೆರವು ಅನುಮಾನ

Last Updated 12 ಡಿಸೆಂಬರ್ 2021, 12:35 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸುಸ್ತಿ ಸಾಲ ಕಡಿಮೆ ಆಗಿರುವುದರಿಂದ ಅವುಗಳ ಸ್ಥಿತಿ ಸುಧಾರಿಸಿದೆ. ಹೀಗಾಗಿ ಕೇಂದ್ರ ಸರ್ಕಾರವು 2022–23ನೇ ಸಾಲಿನ ಬಜೆಟ್‌ನಲ್ಲಿ ಅವುಗಳಿಗೆ ಬಂಡವಾಳ ನೆರವು ಘೋಷಣೆ ಮಾಡುವುದು ಅನುಮಾನ ಎಂದು ಮೂಲಗಳು ಹೇಳಿವೆ.

ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಿಂದ ಬಂಡವಾಳ ಸಂಗ್ರಹಿಸಲು ಮತ್ತು ಪ್ರಮುಖವಲ್ಲದ ಆಸ್ತಿಗಳನ್ನು ಮಾರಾಟ ಮಾಡಲು ಸರ್ಕಾರವು ಬ್ಯಾಂಕ್‌ಗಳಿಗೆ ಉತ್ತೇಜನ ನೀಡಲಿದೆ ಎಂದು ತಿಳಿಸಿವೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಹೊಸದಾಗಿ ಬಂಡವಾಳ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ₹ 20 ಸಾವಿರ ಕೋಟಿ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವರಿ 1ರಂದು 2022–23ನೇ ಸಾಲಿನ ಬಜೆಟ್‌ ಮಂಡಿಸುವ ನಿರೀಕ್ಷೆ ಇದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ನಿವ್ವಳ ಲಾಭವು ಮೊದಲ ತ್ರೈಮಾಸಿಕದಲ್ಲಿ ₹ 14,012 ಕೋಟಿಗ ಆಗಿದ್ದು, ಎರಡನೇ ತ್ರೈಮಾಸಿಕದಲ್ಲಿ ₹ 17,132 ಕೋಟಿಗೆ ಏರಿಕೆ ಕಂಡಿದೆ. ಎರಡೂ ತ್ರೈಮಾಸಿಕಗಳ ಒಟ್ಟಾರೆ ನಿವ್ವಳ ಲಾಭವು ಹಿಂದಿನ ಹಣಕಾಸು ವರ್ಷದ ಒಟ್ಟಾರೆ ಲಾಭದ ಸಮೀಪಕ್ಕೆ ಬರಲಿದೆ ಎಂದು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT