ಶುಕ್ರವಾರ, ಜುಲೈ 30, 2021
21 °C

ಬ್ಯಾಂಕ್‌ಗಳ ಖಾಸಗೀಕರಣಕ್ಕೂ ಕೋವಿಡ್‌ ಅಡ್ಡಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಬಿಕ್ಕಟ್ಟು ಹಾಗೂ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ (ಪಿಎಸ್‌ಬಿ‌) ಮೌಲ್ಯ ಇಳಿಮುಖ ಆಗಿರುವುದರಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಖಾಸಗೀಕರಣ ಗೊಳಿಸುವುದು ಕಷ್ಟವಾಗಲಿದೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ.

ಸದ್ಯ, ಸರ್ಕಾರಿ ಸ್ವಾಮ್ಯದ ನಾಲ್ಕು ಬ್ಯಾಂಕ್‌ಗಳು ಆರ್‌ಬಿಐನ ಕಠಿಣ ಸ್ವರೂಪದ ಆರ್ಥಿಕ ನಿರ್ಬಂಧಗಳ (ಪಿಸಿಎ) ವ್ಯಾಪ್ತಿಗೆ ಒಳಪಟ್ಟಿವೆ. ಹೀಗಾಗಿ ಇಂಡಿಯನ್‌ ಓವರ್‌ಸಿಸ್ ಬ್ಯಾಂಕ್‌, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ಯೂಕೊ ಬ್ಯಾಂಕ್‌ ಮತ್ತು ಯುನೈಟೆಡ್‌ ಬ್ಯಾಂಕ್‌ ಆಫ್‌ ಇಂಡಿಯಾವನ್ನು ಮಾರಾಟ ಮಾಡುವುದು ಸೂಕ್ತವಾದ ನಿರ್ಧಾರ ಅಲ್ಲ ಎಂದು ಹೇಳಿವೆ.

ಬ್ಯಾಂಕ್‌ಗಳ ಮೌಲ್ಯ ಇಳಿಮುಖವಾಗಿದೆ. ಹೀಗಾಗಿ ಷೇರು ಮಾರಾಟವೂ ಕಷ್ಟವಾಗಿದೆ. ಬಾಸೆಲ್‌–3 ಮಾನದಂಡ ತಲುಪಲು ಕೇಂದ್ರ ಸರ್ಕಾರ ಬಂಡವಾಳ ನೆರವು ಒದಗಿಸಿರುವುದರಿಂದ ಕೆಲವು ಬ್ಯಾಂಕ್‌ಗಳಲ್ಲಿ ಸರ್ಕಾರದ ಷೇರುಪಾಲು ಶೇ 75ರಷ್ಟಾಗಿದೆ.

ಕೋವಿಡ್‌ನಿಂದಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಚೇತರಿಕೆಗಷ್ಟೇ ಅಡ್ಡಿಯಾಗಿಲ್ಲ. ಖಾಸಗಿ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಯ ಮೇಲೆಯೂ ಪರಿಣಾಮ ಬೀರಿದೆ ಎಂದೂ ತಿಳಿಸಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು