ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಟ್ರಿಕ್ ಹೆದ್ದಾರಿ ಅಭಿವೃದ್ಧಿ: ಗಡ್ಕರಿ

Last Updated 12 ಸೆಪ್ಟೆಂಬರ್ 2022, 15:37 IST
ಅಕ್ಷರ ಗಾತ್ರ

ನವದೆಹಲಿ: ವಿದ್ಯುತ್‌ ಚಾಲಿತ ಭಾರಿ ಟ್ರಕ್‌ಗಳು ಹಾಗೂ ಬಸ್ಸುಗಳ ಚಾರ್ಜಿಂಗ್‌ಗೆ ಅವಕಾಶ ಇರುವ, ಸೌರ ವಿದ್ಯುತ್‌ ಸಂಪರ್ಕ ಇರುವ ಎಲೆಕ್ಟ್ರಿಕ್‌ ಹೆದ್ದಾರಿಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ ಅವರು, ‘ಸರ್ಕಾರವು ಸೌರವಿದ್ಯುತ್ ಹಾಗೂ ಪವನ ವಿದ್ಯುತ್ ಆಧಾರಿತ ಚಾರ್ಜಿಂಗ್ ವ್ಯವಸ್ಥೆಗೆ ಉತ್ತೇಜನ ನೀಡುತ್ತಿದೆ’ ಎಂದಿದ್ದಾರೆ. ಎಲೆಕ್ಟ್ರಿಕ್ ಹೆದ್ದಾರಿ ಎಂದರೆ ಸಾಮಾನ್ಯವಾಗಿ, ಚಲಿಸುವ ವಾಹನಗಳಿಗೆ ವಿದ್ಯುತ್ ಪೂರೈಸುವ ವ್ಯವಸ್ಥೆ ಇರುವ ಮಾರ್ಗ ಎಂಬ ಅರ್ಥವಿದೆ.

ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕ ಒಟ್ಟು ಮೂರು ಕೋಟಿ ಸಸಿಗಳನ್ನು ನೆಡಲಾಗುವುದು ಎಂದು ಗಡ್ಕರಿ ಹೇಳಿದ್ದಾರೆ.

ಹೆದ್ದಾರಿ ಟೋಲ್ ಸಂಗ್ರಹಣಾ ಕೇಂದ್ರಗಳಲ್ಲಿ ವಾಹನಗಳ ನಂಬರ್‌ ಪ್ಲೇಟ್‌ಗಳನ್ನು ಸ್ವಯಂಚಾಲಿತವಾಗಿ ಗುರುತಿಸುವ ಹಾಗೂ ಹೆದ್ದಾರಿಗಳಲ್ಲಿ ವಾಹನಗಳನ್ನು ಎಷ್ಟು ದೂರ ಚಾಲನೆ ಮಾಡಲಾಗುತ್ತದೆಯೋ ಅಷ್ಟು ದೂರಕ್ಕೆ ಮಾತ್ರ ಶುಲ್ಕ ಸಂಗ್ರಹಿಸುವ ವ್ಯವಸ್ಥೆಯ ಪ್ರಯೋಗಾರ್ಥ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ. ರಸ್ತೆಗಳನ್ನು ಬಳಸಿದಷ್ಟಕ್ಕೆ ಮಾತ್ರ ಶುಲ್ಕ ಪಾವತಿಸುವ ವ್ಯವಸ್ಥೆಯ ಬಗ್ಗೆ ಅವರು ಹೆಚ್ಚಿನ ವಿವರ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT