ಗುರುವಾರ , ಸೆಪ್ಟೆಂಬರ್ 23, 2021
28 °C

ತೆರಿಗೆ ಸಂಗ್ರಹ ಶೇ 86ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಏಪ್ರಿಲ್–ಜೂನ್ ತ್ರೈಮಾಸಿಕದಲ್ಲಿ ಕೇಂದ್ರ ಸರ್ಕಾರದ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಶೇಕಡ 86ರಷ್ಟು ಏರಿಕೆ ಆಗಿದೆ ಎಂದು ಕೇಂದ್ರವು ಸಂಸತ್ತಿಗೆ ತಿಳಿಸಿದೆ. ಈ ಅವಧಿಯಲ್ಲಿ ಒಟ್ಟು ₹ 5.57 ಲಕ್ಷ ಕೋಟಿ ತೆರಿಗೆ ಮೂಲಕ ಸಂಗ್ರಹ ಆಗಿದೆ.

ನೇರ ತೆರಿಗೆ ಮೂಲಕ ಸಂಗ್ರಹ ಆಗಿರುವ ಮೊತ್ತವು ₹ 2.46 ಲಕ್ಷ ಕೋಟಿ, ಪರೋಕ್ಷ ತೆರಿಗೆ ಮೂಲಕ ಸಂಗ್ರಹವಾಗಿರುವ ಮೊತ್ತವು ₹ 3.11 ಲಕ್ಷ ಕೋಟಿ. ‘ಹಿಂದಿನ ವರ್ಷದ ಇದೇ ಅವಧಿಯಲ್ಲಿ ಆಗಿದ್ದ ನೇರ ತೆರಿಗೆ ಸಂಗ್ರಹ ₹ 1.17 ಲಕ್ಷ ಕೋಟಿ. ನೇರ ತೆರಿಗೆ ಸಂಗ್ರಹದಲ್ಲಿ ಶೇ 109.3ರಷ್ಟು ಏರಿಕೆ ಕಂಡುಬಂದಿದೆ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಹಿಂದಿನ ವರ್ಷದ ಈ ಅವಧಿಯಲ್ಲಿ ಆಗಿದ್ದ ಪರೋಕ್ಷ ತೆರಿಗೆ ಸಂಗ್ರಹವು ₹ 1.82 ಲಕ್ಷ ಕೋಟಿ. ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಒಟ್ಟು ಶೇ 70.3ರಷ್ಟು ಏರಿಕೆ ದಾಖಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.