ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಗೆ ರೈತರ ಹೆಸರು ನೋಂದಣಿ ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ನೋಂದಣಿ ಅವಧಿಯನ್ನು ಇದೇ 20ರ ವರೆಗೆ ಹಾಗೂ ಖರೀದಿ ಅವಧಿಯನ್ನು ಇದೇ 22ರ ವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರತಿ ಕ್ವಿಂಟಲ್ ಶೇಂಗಾಕ್ಕೆ ₹6,783 ಬೆಲೆ ನಿಗದಿಪಡಿಸಲಾಗಿದೆ. ಖರೀದಿ ಅವಧಿ ವಿಸ್ತಸುವಂತೆ ಬೇಡಿಕೆ ಬಂದಿದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.