ನವದೆಹಲಿ: ಫೆಬ್ರುವರಿ ತಿಂಗಳಿನಲ್ಲಿ ದೇಶದ ರಿಟೇಲ್ ಮಾರುಕಟ್ಟೆಯಲ್ಲಿ 24.09 ಲಕ್ಷ ವಾಹನಗಳು ಮಾರಾಟವಾಗಿವೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್ಎಡಿಎ) ಗುರುವಾರ ತಿಳಿಸಿದೆ.

ಕಳೆದ ವರ್ಷದ ಫೆಬ್ರುವರಿಯಲ್ಲಿ 19.17 ಲಕ್ಷ ವಾಹನಗಳು ಮಾರಾಟವಾಗಿದ್ದವು. ಇದಕ್ಕೆ ಹೋಲಿಸಿದರೆ ಈ ಬಾರಿ ವಾಹನಗಳ ಮಾರಾಟದಲ್ಲಿ ಶೇ 25.62ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ 25ರಷ್ಟು ಏರಿಕೆಯಾಗಿದ್ದರೆ, ತ್ರಿಚಕ್ರ ವಾಹನಗಳು (ಶೇ 24), ಪ್ರಯಾಣಿಕ ವಾಹನಗಳು (ಶೇ 26) ಮತ್ತು ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ 29ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

‘ಜಿಎಸ್ಟಿ ದರ ಪರಿಷ್ಕರಣೆ, ಮದುವೆ ಋತು, ಹೊಸ ಮಾದರಿಯ ವಾಹನಗಳ ಬಿಡುಗಡೆಯು ಮಾರಾಟದ ಹೆಚ್ಚಳಕ್ಕೆ ಕಾರಣವಾಗಿವೆ’ ಎಂದು ಎಫ್ಎಡಿಎ ಅಧ್ಯಕ್ಷ ಸಿ.ಎಸ್. ವಿಘ್ನೇಶ್ವರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.