ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಟೋಬರ್‌ನಲ್ಲಿ ಎರಡನೆಯ ಅತಿಹೆಚ್ಚಿನ ಜಿಎಸ್‌ಟಿ ಸಂಗ್ರಹ

Last Updated 1 ನವೆಂಬರ್ 2022, 14:02 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯ ಅಡಿಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ₹ 1.52 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿದೆ. ಇದು ಜಿಎಸ್‌ಟಿ ಜಾರಿಗೆ ಬಂದ ನಂತರದಲ್ಲಿ ಆಗಿರುವ ಎರಡನೆಯ ಅತಿಹೆಚ್ಚಿನ ಮಾಸಿಕ ವರಮಾನ ಸಂಗ್ರಹ.

ಅಕ್ಟೋಬರ್ ತಿಂಗಳ ವರಮಾನ ಸಂಗ್ರಹವು ಹಬ್ಬಗಳ ಸಂದರ್ಭದಲ್ಲಿ ದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿದ್ದವು ಎಂಬುದನ್ನೂ ಸೂಚಿಸುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್ ತಿಂಗಳಲ್ಲಿ ₹ 1.30 ಲಕ್ಷ ಕೋಟಿ ವರಮಾನ ಸಂಗ್ರಹವಾಗಿತ್ತು.

ಏಪ್ರಿಲ್‌ ತಿಂಗಳಲ್ಲಿ ₹ 1.68 ಲಕ್ಷ ಕೋಟಿ ವರಮಾನ ಸಂಗ್ರಹವಾಗಿತ್ತು. ಇದು ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಆದ ಅತಿಹೆಚ್ಚಿನ ವರಮಾನ ಸಂಗ್ರಹ.

ಅಕ್ಟೋಬರ್ ತಿಂಗಳ ವರಮಾನ ಸಂಗ್ರಹವನ್ನೂ ಪರಿಗಣಿಸಿದರೆ, ಜಿಎಸ್‌ಟಿ ವ್ಯವಸ್ಥೆ ಅಡಿಯಲ್ಲಿ ಸಂಗ್ರಹವಾಗುತ್ತಿರುವ ವರಮಾನವು ಸತತ ಎಂಟು ತಿಂಗಳುಗಳಿಂದ ₹ 1.40 ಲಕ್ಷ ಕೋಟಿಗಿಂತ ಹೆಚ್ಚಿನ ಮಟ್ಟದಲ್ಲಿ ಇದೆ.

‘ಅಕ್ಟೋಬರ್‌ ತಿಂಗಳಲ್ಲಿನ ಹಬ್ಬಗಳ ಸಂದರ್ಭದಲ್ಲಿ ಇ–ವೇ ಬಿಲ್‌ ಸೃಷ್ಟಿಯೂ ಹೆಚ್ಚಿನ ಮಟ್ಟದಲ್ಲಿ ಆಗಿರುತ್ತದೆ ಎಂಬ ನಿರೀಕ್ಷೆ ಇದೆ. ಹೀಗಾಗಿ, ನವೆಂಬರ್‌ನಲ್ಲಿಯೂ ಜಿಎಸ್‌ಟಿ ಸಂಗ್ರಹವು ಹೆಚ್ಚಿನ ಮಟ್ಟದಲ್ಲಿ ಇರಲಿದೆ’ ಎಂದು ಐಸಿಆರ್‌ಎ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್ ಹೇಳಿದ್ದಾರೆ.

ಕೇಂದ್ರ ಜಿಎಸ್‌ಟಿ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ಬಜೆಟ್ ಅಂದಾಜಿಗಿಂತ ₹ 1.3 ಲಕ್ಷ ಕೋಟಿ ಅಥವಾ ₹ 1.4 ಲಕ್ಷ ಕೋಟಿಯಷ್ಟು ಹೆಚ್ಚಾಗಬಹುದು ಎಂಬುದು ಐಸಿಆರ್‌ಎ ಅಂದಾಜು.

ನವೆಂಬರ್‌ ನಂತರದಲ್ಲಿ ಜಿಎಸ್‌ಟಿ ಮಾಸಿಕ ಸಂಗ್ರಹವು ₹ 1.50 ಲಕ್ಷ ಕೋಟಿಗಿಂತ ಹೆಚ್ಚಿನ ಮಟ್ಟದಲ್ಲಿ ಇರುವ ನಿರೀಕ್ಷೆ ಇದೆ ಎಂದು ಪರೋಕ್ಷ ತೆರಿಗೆಗಳ ತಜ್ಞ ಪರಾಗ್ ಮೆಹ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT