ಕರ್ನಾಟಕದಲ್ಲಿ ಶೇ 5ರಷ್ಟು ಬೆಳವಣಿಗೆ
ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. 2024ರ ಡಿಸೆಂಬರ್‌ನಲ್ಲಿ ₹6389 ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಇದು ಕಳೆದ ವರ್ಷದ ಡಿಸೆಂಬರ್‌ನಲ್ಲಿ ₹6716 ಕೋಟಿಗೆ ಏರಿಕೆಯಾಗಿದ್ದು ಶೇ 5ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಮಹಾರಾಷ್ಟ್ರವು ಅತಿ ಹೆಚ್ಚು ₹16140 ಕೋಟಿ ಜಿಎಸ್‌ಟಿ ಸಂಗ್ರಹಿಸಿದ ರಾಜ್ಯ ಎನಿಸಿದೆ. ಜಿಎಸ್‌ಟಿ ಸಂಗ್ರಹ ಬೆಳವಣಿಗೆ ದರ ಶೇ 15ರಷ್ಟಿದೆ.