ಬುಧವಾರ, ಮೇ 27, 2020
27 °C

ಜಿಎಸ್‌ಟಿ ಸಂಗ್ರಹ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರ ಹಾಕಿಕೊಂಡಿದ್ದ ಗುರಿಯಂತೆ ಮಾರ್ಚ್‌ನಲ್ಲಿ ಜಿಎಸ್‌ಟಿ ಸಂಗ್ರಹವಾಗಿಲ್ಲ.

ಮಾರ್ಚ್‌ನಲ್ಲಿ ₹ 1.25 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹಿಸುವ ಗುರಿಯನ್ನು ಸರ್ಕಾರ ನಿಗದಿಪಡಿಸಿತ್ತು. ಆದರೆ, ಸಂಗ್ರಹವಾಗಿರುವುದು ₹ 97,597 ಕೋಟಿ ಮಾತ್ರ.

ಫೆಬ್ರುವರಿಯಲ್ಲಿ ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೂ ₹7,403 ಕೋಟಿ ಕಡಿಮೆಯಾಗಿದೆ.

2020ರ ಮಾರ್ಚ್‌31ರ ಅಂತ್ಯಕ್ಕೆ 76.5 ಲಕ್ಷ ಜಿಎಸ್‌ಟಿಆರ್‌–3ಬಿ ರಿಟರ್ನ್ಸ್‌ ಸಲ್ಲಿಕೆಯಾಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ರೆವಿನ್ಯೂ ಕಾರ್ಯದರ್ಶಿ ಅಜಯ್‌ ಭೂಷಣ್ ಪಾಂಡೆ ನೇತೃತ್ವದ ಸಮಿತಿಯು ತೆರಿಗೆ ಸಂಗ್ರಹದ ಗುರಿ ನಿಗದಿಪಡಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು