ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಸಂಗ್ರಹದಲ್ಲಿ ಇಳಿಕೆ

Last Updated 1 ಅಕ್ಟೋಬರ್ 2019, 20:27 IST
ಅಕ್ಷರ ಗಾತ್ರ

ನವದೆಹಲಿ : ಮಂದಗತಿಯ ಆರ್ಥಿಕ ಬೆಳವಣಿಗೆಯು ಜಿಎಸ್‌ಟಿ ಸಂಗ್ರಹದ ಮೇಲೆಯೂ ಪರಿಣಾಮ ಬೀರುತ್ತಿದೆ. ತಿಂಗಳಿನಿಂದ ತಿಂಗಳಿಗೆ ಸಂಗ್ರಹದಲ್ಲಿ ಇಳಿಕೆ ಕಂಡುಬರುತ್ತಿದೆ.

ಆಗಸ್ಟ್‌ನಲ್ಲಿ ₹ 98,202 ಕೋಟಿ ಸಂಗ್ರಹವಾಗಿತ್ತು. ಸೆಪ್ಟೆಂಬರ್‌ನಲ್ಲಿ ₹ 91,916 ಕೋಟಿಗೆ ಇಳಿಕೆಯಾಗಿದೆಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

2018ರ ಸೆಪ್ಟೆಂಬರ್‌ನಲ್ಲಿ ಸಂಗ್ರಹವಾಗಿದ್ದ ₹ 94,442 ಕೋಟಿಗೆ ಹೋಲಿಸಿದರೂ 2019ರ ಸೆಪ್ಟೆಂಬರ್‌ನಲ್ಲಿ ಶೇ 2.67ರಷ್ಟು ಇಳಿಕೆಯಾಗಿದೆ.

2019ರ ಜನವರಿಯಿಂದ ಆಗಸ್ಟ್‌ ಅವಧಿಯಲ್ಲಿ ಮೂರನೇ ಬಾರಿಗೆ ಜಿಎಸ್‌ಟಿ ಸಂಗ್ರಹವು ₹ 1 ಲಕ್ಷ ಕೋಟಿ
ಗಿಂತಲೂ ಕೆಳಕ್ಕೆ ಇಳಿದಿದೆ.ಆಗಸ್ಟ್‌ ತಿಂಗಳ ಜಿಎಸ್‌ಟಿಆರ್‌ 3ಬಿ ಸಲ್ಲಿಕೆಯು ಸೆಪ್ಟೆಂಬರ್‌ 30ರವರೆಗೆ 75.94 ಲಕ್ಷದಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT