ಸೋಮವಾರ, ಸೆಪ್ಟೆಂಬರ್ 27, 2021
29 °C

ಏಪ್ರಿಲ್‌ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ 2019 ಏಪ್ರಿಲ್‌ನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಒಟ್ಟಾರೆ ₹ 1.13 ಲಕ್ಷ ಕೋಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಮಾರ್ಚ್‌ನಲ್ಲಿ 1.06 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿತ್ತು. ಜಿಎಸ್‌ಟಿ ಜಾರಿ
ಗೊಳಿಸಿದ ಬಳಿಕ ಏಪ್ರಿಲ್‌ನಲ್ಲಿ ಗರಿಷ್ಠ ತೆರಿಗೆ ಸಂಗ್ರಹವಾಗಿದೆ. ಶೇ 10.05ರಷ್ಟು ಪ್ರಗತಿ ಸಾಧ್ಯವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಮಾರ್ಚ್‌ ತಿಂಗಳ ಮಾರಾಟದ ಅಂತಿಮ ರಿಟರ್ನ್ಸ್‌ ಜಿಎಸ್‌ಟಿಆರ್‌–3ಬಿ ಸಲ್ಲಿಕೆ ಏಪ್ರಿಲ್‌ 30ರವರೆಗೆ 72.13 ಲಕ್ಷದಷ್ಟಾಗಿದೆ. 

2019–20ನೇ ಹಣಕಾಸು ವರ್ಷದಲ್ಲಿ ಸಿಜಿಎಸ್‌ಟಿಯಿಂದ ₹ 6.10 ಲಕ್ಷ ಕೋಟಿ ಮತ್ತು ಪರಿಹಾರ ಸೆಸ್‌ನಿಂದ ₹ 1.01 ಲಕ್ಷ ಕೋಟಿ ಸಂಗ್ರಹಿಸುವ ನಿರೀಕ್ಷೆ ಹೊಂದಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು