ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೂನ್‌ನಲ್ಲಿ ₹1.74 ಲಕ್ಷ ಕೋಟಿ GST ಸಂಗ್ರಹ

Published 1 ಜುಲೈ 2024, 15:57 IST
Last Updated 1 ಜುಲೈ 2024, 15:57 IST
ಅಕ್ಷರ ಗಾತ್ರ

ನವದೆಹಲಿ: ಜೂನ್‌ ತಿಂಗಳಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ ಶೇ 8ರಷ್ಟು ಏರಿಕೆಯಾಗಿ ₹1.74 ಲಕ್ಷ ಕೋಟಿಗೆ ತಲಿಪಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಮಾಸಿಕ ಜಿಎಸ್‌ಟಿ ಸಂಗ್ರಹದ ದತ್ತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡುವುದನ್ನು ಸರ್ಕಾರ ಸ್ಥಗಿತಗೊಳಿಸಿದೆ. ಮುಂದೆಯೂ ಇದು ಮುಂದುವರಿಯಲಿದೆ ಎಂದು ಮೂಲಗಳು ಹೇಳಿವೆ.

ಈ ಹಣಕಾಸು ವರ್ಷದಲ್ಲಿ (ಏಪ್ರಿಲ್‌–ಜೂನ್‌) ₹5.57 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿದೆ ಎಂದೂ ಮೂಲಗಳು ಮಾಹಿತಿ ನೀಡಿವೆ.

2024ರ ಮೇ ತಿಂಗಳಿನಲ್ಲಿ ₹1.73 ಲಕ್ಷ ಕೋಟಿ ಹಾಗೂ 2023ರ ಜೂನ್‌ನಲ್ಲಿ ₹1.61 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು.

ಇದೇ ವರ್ಷ ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹ ದಾಖಲೆಯ ₹2.10 ಲಕ್ಷ ಕೋಟಿ ಮುಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT