ಶುಕ್ರವಾರ, ಅಕ್ಟೋಬರ್ 23, 2020
22 °C

ಸೆಪ್ಟೆಂಬರ್‌ ಜಿಎಸ್‌ಟಿ ಸಂಗ್ರಹ ₹ 95,480 ಕೊಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಸೆಪ್ಟೆಂಬರ್‌ನಲ್ಲಿ ₹ 95,480 ಕೋಟಿಗೆ ತಲುಪಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಸಂಗ್ರಹ ಆಗಿರುವ ಗರಿಷ್ಠ ಮೊತ್ತ ಇದು ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.

2019ರ ಸೆಪ್ಟೆಂಬರ್‌ಗೆ ಹೋಲಿಸಿದರೆ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಶೇಕಡ 4ರಷ್ಟು ಹೆಚ್ಚು ಹಣ ಸಂಗ್ರಹವಾಗಿದೆ.

ಸಂಗ್ರಹವಾಗಿರುವ ಒಟ್ಟಾರೆ ತೆರಿಗೆಯಲ್ಲಿ ಕೇಂದ್ರ ಜಿಎಸ್‌ಟಿ ಪಾಲು ₹ 17,741 ಕೋಟಿ, ರಾಜ್ಯ ಜಿಎಸ್‌ಟಿ ಪಾಲು ₹ 23,131 ಕೋಟಿ, ಸಮಗ್ರ ಜಿಎಸ್‌ಟಿ ₹ 47,484 ಕೋಟಿ ಹಾಗೂ ಸೆಸ್‌ ₹ 7,124 ಕೋಟಿ ಎಂದು ಸಚಿವಾಲಯ ತಿಳಿಸಿದೆ.

ತೆರಿಗೆ ಸಂಗ್ರಹದ ವಿವರ (ಕೋಟಿಗಳಲ್ಲಿ)

ಏಪ್ರಿಲ್‌;₹32,171

ಮೇ;₹62,151

ಜೂನ್‌;₹90,917

ಜುಲೈ;₹87,422

ಆಗಸ್ಟ್‌;₹86,449

ಸೆಪ್ಟೆಂಬರ್‌;₹ 95,480

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು