ಜಿಎಸ್‌ಟಿ ಸಂಗ್ರಹ ಇಳಿಕೆ: ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ

7

ಜಿಎಸ್‌ಟಿ ಸಂಗ್ರಹ ಇಳಿಕೆ: ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ

Published:
Updated:

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ನವೆಂಬರ್‌ನಲ್ಲಿ ₹ 97,637 ಕೋಟಿಯಷ್ಟಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಅಕ್ಟೋಬರ್‌ನಲ್ಲಿ ಸಂಗ್ರಹವಾಗಿದ್ದ ₹1 ಲಕ್ಷ ಕೋಟಿಗೆ ಹೋಲಿಸಿದರೆ ನವೆಂಬರ್‌ನಲ್ಲಿ ₹2,363 ಕೋಟಿ ಕಡಿಮೆ ಸಂಗ್ರಹವಾಗಿದೆ.

ಮಾರಾಟದ ಅಂತಿಮ ರಿಟರ್ನ್‌ ‘ಜಿಎಸ್‌ಟಿಆರ್‌–3ಬಿ’ ಸಲ್ಲಿಕೆ 69.6 ಲಕ್ಷಕ್ಕೆ ತಲುಪಿದೆ. ಆಗಸ್ಟ್‌–ಸೆಪ್ಟೆಂಬರ್‌ನಲ್ಲಿ ರಾಜ್ಯಗಳಿಗೆ ನೀಡಿರುವ ಪರಿಹಾರದ ಮೊತ್ತ ₹11,922 ಕೋಟಿಯಷ್ಟಿದೆ.

‘ಅಕ್ಟೋಬರ್‌ಗೆ ಹೋಲಿಸಿದರೆ ನವೆಂಬರ್‌ ತಿಂಗಳ ಜಿಎಸ್‌ಟಿ ಸಂಗ್ರಹ ಇಳಿಕೆಯಾಗಿದೆ. ಆದರೆ, ಹಣಕಾಸು ವರ್ಷದ ತಿಂಗಳಿನಲ್ಲಿ ಸಂಗ್ರಹವಾಗಿರುವ ಗರಿಷ್ಠ ಮೊತ್ತ ಇದಾಗಿದೆ’ ಎಂದು ಸಲಹಾ ಸಂಸ್ಥೆ ಅರ್ನ್ಸ್ಟ್‌ ಆ್ಯಂಡ್‌ ಯಂಗ್‌ (ಇವೈ) ತೆರಿಗೆ ಪಾಲುದಾರ ಅಭಿಷೇಕ್‌ ಜೈನ್‌ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !