ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಸಂಗ್ರಹ ಶೇ 10ರಷ್ಟು ಹೆಚ್ಚಳ

Published 1 ಜನವರಿ 2024, 16:08 IST
Last Updated 1 ಜನವರಿ 2024, 16:08 IST
ಅಕ್ಷರ ಗಾತ್ರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ 2023ನೇ ಹಣಕಾಸು ವರ್ಷದ ಡಿಸೆಂಬರ್‌ನಲ್ಲಿ ₹1.64 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ.

2022ನೇ ಆರ್ಥಿಕ ವರ್ಷದ ಡಿಸೆಂಬರ್‌ನಲ್ಲಿ ಸಂಗ್ರಹವಾಗಿದ್ದ ₹1.49 ಲಕ್ಷ ಕೋಟಿಗೆ ಹೋಲಿಸಿದರೆ, ಶೇ 10ರಷ್ಟು ಹೆಚ್ಚು ವರಮಾನ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

2023ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ₹14.97 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಒಟ್ಟು ಶೇ 12ರಷ್ಟು ಹೆಚ್ಚಳವಾಗಿತ್ತು. ಇದೇ ಅವಧಿಯಲ್ಲಿ ತಿಂಗಳ ಸರಾಸರಿ ಸಂಗ್ರಹವು ₹1.66 ಲಕ್ಷ ಕೋಟಿ ಇದೆ ಎಂದು ಹೇಳಿದೆ.

2022ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ₹13.40 ಲಕ್ಷ ಕೋಟಿ ಸಂಗ್ರಹವಾಗಿತ್ತು. ಅಲ್ಲದೇ, ಈ ಅವಧಿಯಲ್ಲಿ ಸರಾಸರಿ ಸಂಗ್ರಹ ₹1.49 ಲಕ್ಷ ಕೋಟಿ ಇತ್ತು ಎಂದು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT