ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಪರಿಹಾರ ಸೆಸ್‌ 2026ರವರೆಗೆ ವಿಸ್ತರಣೆ

ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆ ಪ್ರಕಟ
Last Updated 25 ಜೂನ್ 2022, 17:37 IST
ಅಕ್ಷರ ಗಾತ್ರ

ನವದೆಹಲಿ: ಆರೋಗ್ಯಕ್ಕೆ ಹಾನಿಕರವಾದ ವಸ್ತುಗಳು ಮತ್ತು ಐಷಾರಾಮಿ ಸರಕುಗಳ ಮೇಲೆಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ವಿಧಿಸುವ ಪರಿಹಾರ ಸೆಸ್‌ ಅನ್ನು 2026ರ ಮಾರ್ಚ್‌ 31ರವರೆಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವಾಲಯವು ಶನಿವಾರ ಅಧಿಸೂಚನೆ ಹೊರಡಿಸಿದೆ.

ಸೆಸ್‌ ಅವಧಿಯು ಇದೇ 30ಕ್ಕೆ ಅಂತ್ಯವಾಗಬೇಕಿತ್ತು. ಆದರೆ, ವರಮಾನ ಸಂಗ್ರಹದಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕಳೆದ ಎರಡು ಹಣಕಾಸು ವರ್ಷದಲ್ಲಿ ಮಾರುಕಟ್ಟೆಯಿಂದ ಸಾಲ ಪಡೆಯಲಾಗಿದೆ. ಅದನ್ನು ಮರುಪಾವತಿ ಮಾಡಲು ಸೆಸ್‌ ಸಂಗ್ರಹಿಸುವ ಅವಧಿ
ಯನ್ನು 2026ರವರೆಗೆ ವಿಸ್ತರಿಸಲು 2021ರ ಸೆಪ್ಟೆಂಬರ್‌ನಲ್ಲಿ ನಡೆದ ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಅಧಿಸೂಚನೆಯ ಪ್ರಕಾರ, ಪರಿಹಾರ ಸೆಸ್‌ ಅವಧಿಯು 2022ರ ಜುಲೈ 1 ರಿಂದ 2026ರ ಮಾರ್ಚ್‌ 31ರವರೆಗೆ ಮುಂದುವರಿಯಲಿದೆ.

‘ಸೆಸ್‌ ಅವಧಿ ವಿಸ್ತರಣೆ ಮಾಡಿರು ವುದರಿಂದ ತಂಬಾಕು, ಸಿಗರೇಟ್‌, ಐಷಾ ರಾಮಿ ಕಾರುಗಳು ಮತ್ತು ಹಡಗಿನ ಮೇಲಿನ ಗರಿಷ್ಠ ತೆರಿಗೆ ದರವು ಮುಂದುವರಿಯಲಿದೆ’ ಎಂದು ಎಎಂಆರ್‌ಜಿ ಆ್ಯಂಡ್‌ ಅಸೋಸಿಯೇಟ್ಸ್‌ನ ಪಾಲುದಾರ ರಜತ್‌ ಮೋಹನ್‌ ಹೇಳಿದ್ದಾರೆ.

ಜಿಎಸ್‌ಟಿ ವ್ಯವಸ್ಥೆಯನ್ನು 2017ರ ಜುಲೈ 1ರಂದು ದೇಶದಾದ್ಯಂತ ಜಾರಿಗೊಳಿಸಲಾಗಿತ್ತು. ಇದರಿಂದ ರಾಜ್ಯಗಳಿಗೆ ಆಗುವ ವರಮಾನ ನಷ್ಟವನ್ನು ಐದು ವರ್ಷಗಳವರೆಗೆ ತುಂಬಿಕೊಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಪರಿಹಾರ ತುಂಬಿಕೊಡುವ ವ್ಯವಸ್ಥೆಯು ಇದೇ 30ಕ್ಕೆ ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT