ಶುಕ್ರವಾರ, ಮೇ 20, 2022
19 °C

ಜಿಎಸ್‌ಟಿ ಪರಿಹಾರ: ರಾಜ್ಯಕ್ಕೆ ₹1,603 ಕೋಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕರ್ನಾಟಕಕ್ಕೆ ಜಿಎಸ್‌ಟಿ ಪರಿಹಾರವಾಗಿ ನವೆಂಬರ್‌ 3ರ ನಂತರ ₹1,603 ಕೋಟಿ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಬುಧವಾರ ಸಂಸತ್ತಿಗೆ ತಿಳಿಸಿದ್ದಾರೆ.

ಬಿಜೆಪಿ ಸಂಸದ ಕೆ.ಸಿ.ರಾಮಮೂರ್ತಿ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಏಪ್ರಿಲ್‌ 20ರಿಂದ ಮಾರ್ಚ್‌ 2021ರ ಅವಧಿಗೆ ಪಾವತಿಸಬೇಕಾದ ಪರಿಹಾರದ ಭಾಗಶಃ ಮೊತ್ತವಾದ ₹10.369 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆ ಮಾಡಿರುವುದು ಹೆಚ್ಚುವರಿ ಪರಿಹಾರ ಮೊತ್ತವಾಗಿದೆ ಎಂದು ತಿಳಿಸಿದ್ದಾರೆ.

ಜಿಎಸ್‌ಟಿ (ರಾಜ್ಯಗಳಿಗೆ ಪರಿಹಾರ) ಕಾಯ್ದೆ– 2017 ರ ನಿಬಂಧನೆಗಳ ಪ್ರಕಾರ, 2017-18, 2018-19 ಮತ್ತು 2019-20ನೇ ಹಣಕಾಸು ವರ್ಷಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಈಗಾಗಲೇ ಜಿಎಸ್‌ಟಿ ಪರಿಹಾರ ಪಾವತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು