ನವದೆಹಲಿ: ಕೋವಿಡ್ ಅಗತ್ಯ ಸಾಮಗ್ರಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 18 ರಿಂದ ಶೇ 12 ಕ್ಕೆ ಇಳಿಸಲು, ಅಂದರೆ ಶೇ 5ರಷ್ಟು ಕಡಿತ ಮಾಡಲು ಜಿಎಸ್‌ಟಿ ಕೌನ್ಸಿಲ್ ಶುಕ್ರವಾರ ಒಪ್ಪಿಗೆ ಸೂಚಿಸಿದೆ ೆಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕೋವಿಡ್ -19 ಚಿಕಿತ್ಸೆಗೆ ಬಳಸುವ ಔಷಧಿಗಳಾದ ರೆಮ್‌ಡಿಸಿವಿರ್, ಆಮ್ಲಜನಕ ಸಾಂದ್ರಕಗಳು ಮತ್ತು ವೈದ್ಯಕೀಯ ದರ್ಜೆಯ ಆಮ್ಲಜನಕದಂತಹ ಉಪಕರಣಗಳ ಮೇಲಿನ ತೆರಿಗೆ ದರವನ್ನು ಜಿಎಸ್‌ಟಿ ಕೌನ್ಸಿಲ್ ಶನಿವಾರ ಕಡಿತಗೊಳಿಸಿದೆ.

ಲಸಿಕೆಗಳ ಮೇಲಿನ 5% ತೆರಿಗೆ ದರ ಮುಂದುವರಿಸಲು ಅದು ನಿರ್ಧರಿಸಿದೆ.

ಶೇ. 5 ರಷ್ಟಿದ್ದ ಟೊಸಿಲಿಜುಮಬ್ ಮತ್ತು ಆಂಫೊಟೆರಿಸಿನ್ ಬಿ ಮೇಲಿನ ಜಿಎಸ್‌ಟಿಯನ್ನು ಸಂಪೂರ್ಣ ತೆಗೆದುಹಾಕಲಾಗಿದೆ.

ರೆಮ್‌ಡಿಸಿವಿರ್ ಮತ್ತು ಹೆಪಾರಿನ್‌ನಂತಹ ಔಷಧಿಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ.

ವೈದ್ಯಕೀಯ ದರ್ಜೆಯ ಆಮ್ಲಜನಕ, ಆಮ್ಲಜನಕ ಸಾಂದ್ರಕಗಳು, ವೆಂಟಿಲೇಟರ್‌ಗಳು, ಬೈಪಾಪ್(BIPAP) ಯಂತ್ರಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿದೆ.

ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 5ರಷ್ಟು ಇಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ..

ಸೆಪ್ಟೆಂಬರ್‌ವರೆಗೆ ಈ ಹೊಸ ತೆರಿಗೆ ದರ ಜಾರಿಯಲ್ಲಿರಲಿದೆ ಎಂದು ಸಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.