ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಮೆ ಮೇಲಿನ ಜಿಎಸ್‌ಟಿ ಪರಿಷ್ಕರಣೆ: ಅಕ್ಟೋಬರ್‌ 30ಕ್ಕೆ ವರದಿ ಸಲ್ಲಿಕೆ

Published : 15 ಸೆಪ್ಟೆಂಬರ್ 2024, 15:38 IST
Last Updated : 15 ಸೆಪ್ಟೆಂಬರ್ 2024, 15:38 IST
ಫಾಲೋ ಮಾಡಿ
Comments

ನವದೆಹಲಿ: ಆರೋಗ್ಯ ವಿಮೆ ಹಾಗೂ ಜೀವ ವಿಮೆಗಳ ಪ್ರೀಮಿಯಂ ಮೇಲೆ ವಿಧಿಸುತ್ತಿರುವ ಶೇ 18ರಷ್ಟು ಜಿಎಸ್‌ಟಿಯನ್ನು ಕಡಿಮೆಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ರಚಿಸಿರುವ 13 ಸಚಿವರನ್ನು ಒಳಗೊಂಡ ಸಮಿತಿಯು, ಅಕ್ಟೋಬರ್‌ 30ರಂದು ವರದಿ ಸಲ್ಲಿಸಲಿದೆ. 

ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಈ ಸಮಿತಿಯ ಸಂಚಾಲಕರಾಗಿದ್ದಾರೆ. ಉತ್ತರ ಪ್ರದೇಶ, ರಾಜಸ್ಥಾನ, ‍ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಗೋವಾ, ಗುಜರಾತ್‌, ಮೇಘಾಲಯ, ಪಂಜಾಬ್‌, ತಮಿಳುನಾಡು ಮತ್ತು ತೆಲಂಗಾಣದ ಸಚಿವರು ಸಮಿತಿಯ ಸದಸ್ಯರಾಗಿದ್ದಾರೆ.

ಸಮಿತಿಯು ಸಲ್ಲಿಸುವ ವರದಿ ಆಧಾರದ ಮೇಲೆ ನವೆಂಬರ್‌ನಲ್ಲಿ ನಡೆಯುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT