ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಜಿಎಸ್‌ಟಿ ಮಂಡಳಿ ಸಭೆ

Last Updated 19 ಸೆಪ್ಟೆಂಬರ್ 2019, 19:35 IST
ಅಕ್ಷರ ಗಾತ್ರ

ನವದೆಹಲಿ: ಜಿಎಸ್‌ಟಿ ಮಂಡಳಿಯು ಶುಕ್ರವಾರ ಸಭೆ ಸೇರಲಿದ್ದು, ಉದ್ಯಮ ವಲಯವು ತೆರಿಗೆ ದರ ಕಡಿತದ ನಿರೀಕ್ಷೆಯಲ್ಲಿದೆ.

ತೆರಿಗೆ ದರದಲ್ಲಿ ಇಳಿಕೆ ಮಾಡಿದರೆ ಗ್ರಾಹಕರ ಖರೀದಿ ಸಾಮರ್ಥ್ಯ ಹೆಚ್ಚಾಗಲಿದ್ದು, ಆರ್ಥಿಕತೆಯ ಚೇತರಿಕೆಗೆ ನೆರವಾಗಲಿದೆ ಎನ್ನುವುದು ಉದ್ಯಮ ವಲಯದ ವಾದವಾಗಿದೆ.

ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಪ್ರಗತಿ ದರ ಶೇ 5ಕ್ಕೆ ಕುಸಿದಿದೆ.ಹೀಗಾಗಿವರಮಾನ ಸಂಗ್ರಹಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿಯಾಗದಂತೆಆರ್ಥಿಕ ಪ್ರಗತಿಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಮಂಡಳಿಯು ಯಾವೆಲ್ಲಾ ನಿರ್ಧಾರಗಳನ್ನು ಕೈಗೊಳ್ಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಗೋವಾದಲ್ಲಿ,ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.ವಾಹನ ಉದ್ಯಮ, ಬಿಸ್ಕತ್‌, ಎಫ್‌ಎಂಸಿಜಿ, ಹೋಟೆಲ್‌ ಉದ್ಯಮವು ತೆರಿಗೆ ದರ ತಗ್ಗಿಸುವಂತೆ ಬೇಡಿಕೆ ಸಲ್ಲಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT